ಧಾರವಾಡ:ಮೊಹರಂ ದಿನ ಅಲಾಯಿ ಒಳಗಿನ ಬೆಂಕಿ ತುಳಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ.
ಮೊಹರಂ ದಿನವೇ ದುರಂತ: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು - Dharwad two youths drowned into the water news
ಮೊಹರಂ ದಿನ ಅವಘಡ ಸಂಭವಿಸಿದ್ದು, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಕಾಶೀಮ ನಧಾಪ (24) ಹಾಗೂ ಶರೀಫ ನದಾಪ (20) ಮೃತ ದುರ್ದೈವಿಗಳು. ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಸ್ನಾನ ಮಾಡಿ ಅಲಾಯಿ ಒಳಗಿನ ಬೆಂಕಿ ತುಳಿಯಲು ಈ ಇಬ್ಬರು ಯುವಕರು ತಯಾರಾಗಿದ್ದರು. ಈ ಸಂದರ್ಭದಲ್ಲಿ ಕಾಲುಜಾರಿ ಓರ್ವ ಯುವಕ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಮತ್ತೋರ್ವನೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದರೂ ಸಹ ಫಲಕಾರಿಯಾಗಲಿಲ್ಲ. ಸದ್ಯ ಕೆರೆಯಿಂದ ಮೃತದೇಹಗಳನ್ನು ಹೊರತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.