ಹುಬ್ಬಳ್ಳಿ: ನಗರದ ನೀಲಿಜಿನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಹುಬ್ಬಳ್ಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ಅಪರಿಚಿತ ವ್ಯಕ್ತಿಯ ಶವ ಪತ್ತೆ
ಹುಬ್ಬಳ್ಳಿಯ ನೀಲಿಜಿನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕುಡಿದ ಮತ್ತಿನಲ್ಲಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮೃತ ವ್ಯಕ್ತಿ ಅಂದಾಜು 25 ವರ್ಷದ ಆಸುಪಾಸಿನವನಾಗಿದ್ದು, ಕುಡಿದ ಮತ್ತಿನಲ್ಲಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ನ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.