ಕರ್ನಾಟಕ

karnataka

ETV Bharat / state

ಬೈಕ್​​ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸಾವು - ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರರು ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ನವಲಗುಂದ ತಾಲೂಕಿನ ಕಾಲವಾಡ ಗ್ರಾಮದ ಬಸವರಾಜ ತಳವಾರ ಹಾಗೂ ಹನಮಂತ ಚಿಕ್ಕನರ್ತಿ ಮೃತರು.

Unidentified vehicle takes two men lives
ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವು

By

Published : Dec 13, 2020, 11:52 AM IST

ಹುಬ್ಬಳ್ಳಿ:ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸವಾರರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದ ಸರ್ಕಾರಿ ಕಾಲೇಜು ಬಳಿ ತಡರಾತ್ರಿ ಸಂಭವಿಸಿದೆ.

ಬೈಕ್ ಸವಾರರಿಬ್ಬರು ಸಾವು
ನವಲಗುಂದ ತಾಲೂಕಿನ ಕಾಲವಾಡ ಗ್ರಾಮದ ಬಸವರಾಜ ತಳವಾರ ಹಾಗೂ ಹನಮಂತ ಚಿಕ್ಕನರ್ತಿ ಮೃತರು. ಈ ಇಬ್ಬರು ಬೈಕ್​​ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೂ ತೀವ್ರವಾಗಿ ರಕ್ತಸ್ರಾವವಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗ ಮಧ್ಯಯೇ ಮೃತಪಟ್ಟಿದ್ದಾರೆ.

ಈ ಸಂಬಂಧ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For All Latest Updates

ABOUT THE AUTHOR

...view details