ಹುಬ್ಬಳ್ಳಿ: ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡ ಸೇವೆಗಳು ಕೋವಿಡ್ ನಂತರದಲ್ಲಿ ವಿಮಾನ ಸೇವೆ ಚೇತರಿಸಿಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಪುನಾರಂಭ ಆಗಿದೆ. ಇಂದಿನಿಂದ ಹುಬ್ಬಳ್ಳಿ-ದೆಹಲಿ ದೈನಂದಿನ ವಿಮಾನ ಸೇವೆ ಆರಂಭಗೊಂಡಿದ್ದು, ಹುಬ್ಬಳ್ಳಿ-ದೆಹಲಿ ಇಂಡಿಗೋ ವಿಮಾನ ಸೇವೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಪುನಾರಂಭ.. ಕೇಂದ್ರ ಸಚಿವ ಜೋಶಿ ಚಾಲನೆ - ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಪ್ರಮೋದ್ ಠಾಕ್ರೆ
ಈಗಾಗಲೇ ಹುಬ್ಬಳ್ಳಿ - ದೆಹಲಿ ವಿಮಾನ ಸೇವೆ ಮತ್ತೆ ಆರಂಭವಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿ-ದೆಹಲಿ ವಿಮಾನ ಸೇವೆಗೆ ಕೇಂದ್ರ ಸಚಿವ ಜೋಶಿ ಚಾಲನೆ..
ಈಗಾಗಲೇ ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಆರಂಭವಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜೋಶಿ ಮನವಿ ಮಾಡಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಪ್ರಮೋದ್ ಠಾಕ್ರೆ, ಇಂಡಿಗೋ ವಿಮಾನ ಸೇವೆ ಆರಂಭದ ಪೂರ್ವದಲ್ಲಿ ವಿಮಾನದ ತಾಂತ್ರಿಕ ಸ್ಥಿತಿ ಪರಿಶೀಲನೆ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿದೆ ಎಂದರು.
ಇದನ್ನೂ ಓದಿ:ಜನರಿಗೆ ಬೆಲೆ ಏರಿಕೆ ಶಾಕ್.. ನಂದಿನಿ ಹಾಲು, ಮೊಸರಿನ ದರದಲ್ಲಿ ಏರಿಕೆ
Last Updated : Nov 14, 2022, 5:39 PM IST