ಕರ್ನಾಟಕ

karnataka

ETV Bharat / state

ನಕಲಿ ಗಾಂಧಿ ಪರಿವಾರ ಭ್ರಷ್ಟಾಚಾರದ ಬಗ್ಗೆ ಮಾತನಾಡೋದೆ ಅಪಹಾಸ್ಯ: ಪ್ರಹ್ಲಾದ್ ಜೋಶಿ - ರಾಹುಲ್​ ಗಾಂಧಿ

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರದಲ್ಲಿ 10 ವರ್ಷ ನಿರಂತರವಾಗಿ ಭ್ರಷ್ಟಾಚಾರ ಹಗರಣದ್ದೇ ಸುದ್ದಿ ಇತ್ತು. ಹಾಗಾಗಿ ನಕಲಿ ಗಾಂಧಿ ಪರಿವಾರ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ಅಪಹಾಸ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

Union Minister Prahlada Joshi
ಕೇಂದ್ರ ಸಚಿವ ಪ್ರಹ್ಲಾದ ಜೋಶಿ

By

Published : Oct 2, 2022, 2:07 PM IST

ಹುಬ್ಬಳ್ಳಿ:ನಕಲಿ ಗಾಂಧಿ ಪರಿವಾರ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ಒಂದು ದೊಡ್ಡ ಅಪಹಾಸ್ಯ. ರಾಹುಲ್ ಗಾಂಧಿ ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಅವರು ಭಾರತ ಜೋಡೋ ಯಾತ್ರೆ ಮುಗಿದ ತಕ್ಷಣ ವಿಶ್ರಾಂತಿಗೆ ವಿದೇಶಕ್ಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದರು.

ನಗರದಲ್ಲಿಂದು ಗಾಂಧಿ ಜಯಂತಿ ಅಂಗವಾಗಿ ಕಿಮ್ಸ್ ಆವರಣ ಮುಂಭಾಗದಲ್ಲಿ ಮಹಾತ್ಮಗಾಂಧಿ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಈಗಾಗಲೇ ಈ ಹಿಂದಿನ ಚುನಾವಣೆಯಲ್ಲಿ ಜನರು ಯಾರು ಪರ ಇದ್ದಾರೆ ಎಂಬ ತೀರ್ಮಾನವನ್ನು ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರದಲ್ಲಿ 10 ವರ್ಷ ನಿರಂತರವಾಗಿ ಭ್ರಷ್ಟಾಚಾರ ಹಗರಣದ್ದೇ ಸುದ್ದಿ ಇತ್ತು ಎಂದರು‌.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇನ್ನು, ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದ ಸಾಲ ಮೂರು ಪಟ್ಟು ಹೆಚ್ಚಾಗಿದೆ ಎಂಬ ರಾಹುಲ್ ಗಾಂಧಿ ಮಾತಿಗೆ ಪ್ರತಿಕ್ರಿಯೆ ನೀಡಿದ ಸಚಿವ ಜೋಶಿ ಅವರು, ಯಾರ ಕಾಲದಲ್ಲಿ ಹೆಚ್ಚು ಸಾಲ ಆಗಿದೆ ಎಂಬುದರ ಬಗ್ಗೆ ಅಂಕಿ ಅಂಶಗಳಿವೆ. ಕೊರೊನಾ ಸಮಯದಂತಹ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ. ಭಾರತ ಅಭಿವೃದ್ಧಿ ಹೊಂದುತ್ತಿದೆ. ಪ್ರಪಂಚವೇ ಭಾರತವನ್ನು ಗುರುತಿಸುವಂತೆ ಆಗಿದೆ. ಹೀಗಾಗಿ ಭಾರತದ ಹಿರಿಮೆ ಗರಿಮೆ ಬಗ್ಗೆ ಸುಳ್ಳು ಅಪಪ್ರಚಾರ ಮಾಡಬಾರದು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ:ಇಂದು ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ಏಕೆ ಮಾತನಾಡಲಿ: ಸಿಎಂ ತಿರುಗೇಟು

ಈಗಾಗಲೇ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ 398 ಜನರ ಪೈಕಿ ಅತಿಹೆಚ್ಚು ಡಿಪಾಸಿಟ್ ಕಳೆದುಕೊಂಡಿದೆ. ಇದೀಗ ರಾಹುಲ್ ಗಾಂಧಿ ಇನ್ನೊಬ್ಬರು ಬರೆದು ಕೊಟ್ಟಿದ್ದನ್ನು, ನಾಚಿಕೆ ಮಾನ ಮರ್ಯಾದೆ ಇಲ್ಲದೇ ಓದುತ್ತಾರೆ. ಚೀಟಿ ವಾಪಸ್ ಪಡೆದ ನಂತರ ಅದರಲ್ಲಿನ ವಿಷಯ ಗೊತ್ತಿರಲ್ಲ ಎಂದು ರಾಗಾ ವಿರುದ್ಧ ಕೇಂದ್ರ ಸಚಿವರು ಕಿಡಿಕಾರಿದರು.

ABOUT THE AUTHOR

...view details