ಹುಬ್ಬಳ್ಳಿ :ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ. ಆರ್ಥಿಕತೆಯೂ ಸಾಗಬೇಕು. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹೀಗಾಗಿ, ಸರ್ಕಾರ ನೋಡಿಕೊಂಡು ತೀರ್ಮಾನ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಜಯ ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಸಿಕಾ ಅಭಿಯಾನ ಈಗ 15ರಿಂದ 18 ವರ್ಷದ ಮಕ್ಕಳಿಗೆ ನೀಡಲಾಗುತ್ತಿದೆ. ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಹುಬ್ಬಳ್ಳಿಯ ಕೇಶ್ವಾಪೂರದ ಫಾತಿಮಾ ಶಾಲೆಯಲ್ಲಿ 15 ರಿಂದ 18 ವರ್ಷರ್ದಳಗಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂ ಬಗ್ಗೆ ಸಿಎಂ ಅವರಿಗೂ ವೈಯಕ್ತಿಕ ಸಲಹೆ ನೀಡ್ತಿದ್ದೇನೆ. ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಬೇಕು. ಗುರುವಾರ,ಶುಕ್ರವಾರ ಸಭೆ ಇದೆ. ಆಗ ವಾರಂತ್ಯ ಕರ್ಫ್ಯೂ ಬಗ್ಗೆ ನಿರ್ಧಾರ ಮಾಡಲಿ ಎಂದರು.
ಕೇರಳ ಸರ್ಕಾರ ನಾರಾಯಣ ಗುರುಗಳ ಸ್ತಬ್ದ ಚಿತ್ರ ರಿಜೆಕ್ಟ್ ಮಾಡಲಾಗಿದೆ ಎನ್ನುವ ಬಗ್ಗೆ ಸುಳ್ಳು ಸುದ್ದಿ ಹರಡಿಸಲಾಗುತ್ತೆ. ಕೇರಳ ರಾಜ್ಯ ಕೆಲವು ನಿಯಮಗಳನ್ನ ಪೂರ್ತಿ ಮಾಡಿರಲಿಲ್ಲ. ಅಲ್ಲದೆ ಕಳೆದೆರಡೂ ವರ್ಷಗಳಿಂದ ಕೇರಳ ಆಯ್ಕೆಯಾಗಿತ್ತು.