ಕರ್ನಾಟಕ

karnataka

ETV Bharat / state

ಅಳ್ನಾವರ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕ ರೈಲಿಗೆ ಸಿಲುಕಿ ಆತ್ಮಹತ್ಯೆ - Unknown body found at Hubli railway station

ಅಳ್ನಾವರ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Unknown body found at Hubli railway station
ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ

By

Published : Feb 5, 2020, 12:08 PM IST

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸುಮಾರು 25 ರಿಂದ 30 ವರ್ಷದ ವಯಸ್ಸಿನ ಯುವಕನು ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನು ನೀಲಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದಾನೆ.

ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ‌. ಅಪರಿಚಿತ ಯುವಕನ ಶವದ ಗುರುತು ಪತ್ತೆಯಾದವರು ಅಥವಾ ವಾರಸುದಾರರು ಇದ್ದಲ್ಲಿ ದೂರವಾಣಿ ಸಂಖ್ಯೆ 0836-2384751 ಹಾಗೂ ಮೊಬೈಲ್ ಸಂಖ್ಯೆ 9480802126 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details