ಧಾರವಾಡ:ಸಚಿವರಾಗಿ ಮೊದಲ ಬಾರಿಗೆ ಧಾರವಾಡಕ್ಕೆ ಆಗಮಿಸುವ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರ ಸ್ವಾಗತಕ್ಕೆ ಹಾಕಿದ ಬ್ಯಾನರ್ನಲ್ಲಿ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಅವರ ಭಾವಚಿತ್ರ ಕಾಣೆಯಾಗಿತ್ತು.
ನೂತನ ಜಿಲ್ಲಾ ಉಸ್ತುವಾರಿ ಸಚಿವ ಮುನೇನಕೊಪ್ಪ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಅಲ್ಲಲ್ಲಿ ಬ್ಯಾನರ್ ಹಾಕಲಾಗಿತ್ತು. ಬ್ಯಾನರ್ನಲ್ಲಿ ಶಾಸಕ ಬೆಲ್ಲದ ಭಾವಚಿತ್ರ ಹಾಕದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಟೋಲ್ ನಾಕಾದಲ್ಲಿ ಹಾಕಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.