ಕರ್ನಾಟಕ

karnataka

ETV Bharat / state

ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು: ಯಾರಿಗೆ ಸಿಗಲಿದೆ ಸಚಿವ ಸ್ಥಾನದ ಪಟ್ಟ?

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನದ ಪೈಪೋಟಿ ಜೊತೆಗೆ ಸಚಿವ ಸ್ಥಾನ ಹಂಚಿಕೆಯ ತಲೆನೋವು ಕೂಡ ಶುರುವಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಯಾರಿಗೆ ಸಿಗಲಿದೆ ಸಚಿವ ಸ್ಥಾನದ ಪಟ್ಟ
ಧಾರವಾಡ ಜಿಲ್ಲೆಯಲ್ಲಿ ಯಾರಿಗೆ ಸಿಗಲಿದೆ ಸಚಿವ ಸ್ಥಾನದ ಪಟ್ಟ

By

Published : May 15, 2023, 5:18 PM IST

ಹುಬ್ಬಳ್ಳಿ :ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿರುವ ಧಾರವಾಡ ಜಿಲ್ಲೆ ಕಾಂಗ್ರೆಸ್ಸಿಗೆ ಬಹುದೊಡ್ಡ ಗೆಲುವಿನ ಕೊಡುಗೆ ಕೊಟ್ಟಿದೆ. ಏಳು ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಕ್ಷೇತ್ರದಲ್ಲಿ ಕೈ ಬಾವುಟ ಹಾರಿದ್ದು, ಇದೀಗ ಜಿಲ್ಲೆಯಲ್ಲಿ ಯಾರಿಗೆ ಸಿಗಲಿದೆ ಸಚಿವ ಸ್ಥಾನ ಎಂಬ ಕುತೂಹಲ ಮೂಡಿದೆ.

ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಹು-ಧಾ ಪೂರ್ವ, ಧಾರವಾಡ ಗ್ರಾಮೀಣ, ಕಲಘಟಗಿ ಹಾಗೂ ನವಲಗುಂದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಕುಂದಗೋಳ, ಹು-ಧಾ ಪಶ್ಚಿಮ ಹಾಗೂ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ನಿಂದ ಚುನಾಯಿತಗೊಂಡ ನಾಲ್ವರೂ ಹಿರಿತನದ ಶಾಸಕರಾಗಿದ್ದಾರೆ. ಈ ನಾಲ್ವರಲ್ಲಿ ಯಾರು ಸಚಿವರಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ.

ಇದನ್ನೂ ಓದಿ :ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರದ ಚುಕ್ಕಾಣಿ: ಪೊಲೀಸ್ ಇಲಾಖೆಯಲ್ಲಿ ನಡೆಯಲಿದೆಯಾ ಮೇಜರ್ ಸರ್ಜರಿ?

ಸಂತೋಷ್​ ಲಾಡ್ 2008, 2013 ಹಾಗೂ 2023ರ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದರು. ವಿನಯ್​ ಕುಲಕರ್ಣಿ 2004, 2013 ಹಾಗೂ 2023ರಲ್ಲಿ ಜಯ ಸಾಧಿಸಿದ್ದಾರೆ. ಇವರೊಟ್ಟಿಗೆ ಹು-ಧಾ ಪೂರ್ವ ಮೀಸಲು ಕ್ಷೇತ್ರದಿಂದ ಪ್ರಸಾದ್​ ಅಬ್ಬಯ್ಯ ಸತತ ಮೂರನೇ ಬಾರಿ ಉತ್ತಮ ಅಂತರದಿಂದ ಹ್ಯಾಟ್ರಿಕ್ ಗೆಲವು ಸಾಧಿಸಿದ್ದಾರೆ.

ಆದರೆ, ಸಂತೋಷ್​ ಲಾಡ್ ಮತ್ತು ವಿನಯ್​ ಕುಲಕರ್ಣಿ 2013-2018ರ ಸಿದ್ದರಾಮಯ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಗಳಾಗಿ ಕೆಲಸ ಮಾಡಿದರು. ಆ ವೇಳೆ ಪ್ರಸಾದ ಅಬ್ಬಯ್ಯ ಎರಡನೇ ಅವಧಿಯಲ್ಲಿ ಗೆದ್ದಿದ್ದರೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ಪ್ರಸಾದ ಅಬ್ಬಯ್ಯ ಅವರಿಗೆ ಸರ್ಕಾರದ ಅವಧಿಯ ಕೊನೆ ವರ್ಷದಲ್ಲಿ ಜಗಜೀವನರಾಮ್ ನಿಗಮದ ಅಧ್ಯಕ್ಷ ಸ್ಥಾನ ಕೊಟ್ಟು ಸಮಾಧಾನ ಮಾಡಲಾಗಿತ್ತು.

ಇದನ್ನೂ ಓದಿ :'ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ'.. ವಿಶೇಷ ಪೂಜೆ ಸಲ್ಲಿಸಿದ ಕುರುಬ ಸಮುದಾಯ

ಇನ್ನು ಬದಲಾದ ಸನ್ನಿವೇಶದಲ್ಲಿ ಜೆಡಿಎಸ್ ತೊರೆದು ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿರುವ ಎನ್. ಎಚ್. ಕೋನರೆಡ್ಡಿ ಆ ಪಕ್ಷದಲ್ಲಿನ ಜಿಲ್ಲೆಯ ಇತರ ಶಾಸಕರ ಸೀನಿಯಾರಿಟಿ ಲೆಕ್ಕದಲ್ಲಿ ಜ್ಯೂನಿಯರ್. ಹೀಗಾಗಿ ಸದ್ಯದ ಸನ್ನಿವೇಶದಲ್ಲಿ ಸಂತೋಷ್​ ಲಾಡ್, ವಿನಯ್​ ಕುಲಕರ್ಣಿ ಮತ್ತು ಪ್ರಸಾದ ಅಬ್ಬಯ್ಯ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದ್ರೆ ಇವರ ಪೈಕಿ ಯಾರಿಗೆ ಅದೃಷ್ಟ ಖುಲಾಯಿಸುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.

ಯಾರಾಗಲಿದ್ದಾರೆ ಕೈ ಸಿಎಂ :ಮತ್ತೊಂದೆಡೆ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಯಾರು ಎಂಬ ಗೊಂದಲ ಸೃಷ್ಟಿಯಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಪೈಪೋಟಿ ಶುರುವಾಗಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರು ಎಂಬುದು ಸದ್ಯದಲ್ಲೇ ರಾಜ್ಯದ ಜನತೆಯ ಮುಂದೆ ಬಹಿರಂಗಗೊಳ್ಳಿದೆ.

ಇದನ್ನೂ ಓದಿ :ಪುತ್ತೂರಿನಲ್ಲಿ ಬಿಜೆಪಿ ನಾಯಕರ ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆ: ಬಿಜೆಪಿಯಿಂದ ದೂರು, ಪ್ರತಿಭಟನೆ

ABOUT THE AUTHOR

...view details