ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯ ಸಾಕಷ್ಟು ಜನಪರ ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈಗ ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಲಾಗಿದೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ: ಹರಿದ ಧ್ವಜವನ್ನು ಬದಲಿಸದ ಅಧಿಕಾರಿಗಳು - Unrespect
ವಾಣಿಜ್ಯನಗರಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿರುವ ಧ್ವಜ ಸ್ತಂಭದಲ್ಲಿರುವ ರಾಷ್ಟ್ರೀಯ ಧ್ವಜ ಹರಿದಿದ್ದರೂ ಕೂಡ ಅಧಿಕಾರಿಗಳು ಮಾತ್ರ ಈಕಡೆ ಗಮನ ಹರಿಸಿಲ್ಲ.
ಹರಿದ ಧ್ವಜವನ್ನು ಬದಲಿಸದ ಅಧಿಕಾರಿಗಳು
ವಾಣಿಜ್ಯನಗರಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿರುವ ಧ್ವಜ ಸ್ತಂಭದಲ್ಲಿರುವ ರಾಷ್ಟ್ರೀಯ ಧ್ವಜ ಹರಿದಿದ್ದರೂ ಕೂಡ ಅಧಿಕಾರಿಗಳು ಮಾತ್ರ ಯಾವುದೇ ಲಕ್ಷ್ಯ ವಹಿಸದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುಮಾರು ನಾಲ್ಕೈದು ದಿನಗಳ ಹಿಂದೆಯೇ ಧ್ವಜ ಹರಿದಿದ್ದರೂ ಕೂಡ ಅದನ್ನು ಬದಲಾವಣೆ ಮಾಡದೇ ರಾಷ್ಟ್ರೀಯ ಧ್ವಜಕ್ಕೆ ಅಗೌರವ ತೋರಿದ್ದಾರೆ. ಅಲ್ಲದೇ ಲಕ್ಷಾಂತರ ಜನರು ಓಡಾಡುವ ಪ್ರಮುಖ ರೈಲ್ವೆ ನಿಲ್ದಾಣದಲ್ಲಿಯೇ ಇಂತಹ ಅವ್ಯವಸ್ಥೆ ತಾಂಡವವಾಡುತ್ತಿದೆ.