ಧಾರವಾಡ: ಹವಾಮಾನ ಬದಲಾವಣೆಯಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಅಕಾಲಿಕ ವರುಣನ ಆರ್ಭಟಕ್ಕೆ ರೈತ ಕಂಗಾಲಾಗಿ ಹೋಗಿದ್ದಾನೆ. ಮುಂಗಾರು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತ ಈಗ ಹಿಂಗಾರು ಹಂಗಾಮಿನ ಅಕಾಲಿಕ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾನೆ.
ತಾಲೂಕಿನ ಕವಲಗೇರಿ ಗ್ರಾಮದಲ್ಲಿ ರೈತರು ಬೆಳೆದ ಸಂಪೂರ್ಣ ಜೋಳದ ಬೆಳೆ ನೆಲಕಚ್ಚಿದೆ. ರಾತ್ರಿಯಿಡೀ ಬಿಡದೆ ಸುರಿದ ಅಕಾಲಿಕ ಮಳೆಯಿಂದ ರೈತರು ಬೆಳೆದ ಜೋಳ, ಕಡಲೆ, ಗೋಧಿ ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿವೆ. ಉತ್ತಮ ಫಸಲಿನ ಭರವಸೆ ಮೂಡಿಸಿದ್ದ ಜೋಳ ಮಣ್ಣುಪಾಲಾಗಿದೆ.