ಕರ್ನಾಟಕ

karnataka

ETV Bharat / state

ಧಾರವಾಡ ಜಿಲ್ಲೆಯಲ್ಲಿ ತೆರವಾದ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ - undefined

ಚುನಾವಣೆಯ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಿಸಿದ್ದು, ಮೇ 13 ರಂದು ಅಧಿಸೂಚನೆ ಪ್ರಕಟವಾಗಲಿದೆ. ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಸಾಂದರ್ಭಿಕ ಚಿತ್ರ

By

Published : May 12, 2019, 3:58 AM IST

ಧಾರವಾಡ: ವಿವಿಧ ಕಾರಣಗಳಿಂದ ತೆರವಾಗಿರುವ ಕುಂದಗೋಳ ತಾಲೂಕಿನ ಕಳಸ, ಸಂಶಿ, ಚಾಕಲಬ್ಬಿ, ಮತ್ತಿಗಟ್ಟಿ, ನವಲಗುಂದ ತಾಲೂಕಿನ ಶಿರೂರ, ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಹಾಗೂ ಧಾರವಾಡ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯಿತಿಯ ಸ್ಥಾನಗಳಿಗೆ ಮೇ 29 ರಂದು ಮತದಾನ ನಡೆಯಲಿದೆ.

ಚುನಾವಣೆಯ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಿಸಿದ್ದು, ಮೇ 13 ರಂದು ಅಧಿಸೂಚನೆ ಪ್ರಕಟವಾಗಲಿದೆ. ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮೇ 17ರಂದು ನಾಮಪತ್ರಗಳ ಪರಿಶೀಲಿನೆ ನಡೆಯಲಿದೆ.

ಮೇ 20ರ ಸೋಮವಾರ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 29ರ ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮೇ 31ರಂದು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಹೆಚ್ಚಿನ ವಿವರಗಳಿಗೆ ಸಂಬಂಧಿಸಿದ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್​ ಅವರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್​ ‌ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details