ಹುಬ್ಬಳ್ಳಿ: ಬೆಳಗಾವಿಯ ಪಿರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ಒಕ್ಕೂಟದ ಸಂಘಟನೆ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಚಲೋ ಕಾರ್ಯಕ್ರಮ - Piranavadi riot
ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ಒಕ್ಕೂಟದ ಸಂಘಟನೆ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಹುಬ್ಬಳ್ಳಿಯಿಂದ ಬೆಳಗಾವಿ ಚಲೋ ಕಾರ್ಯಕ್ರಮ
ನಗರದ ಸರ್ಕ್ಯೂಟ್ ಹೌಸ್ನಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರು ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮನ ಹೆಸರನ್ನು ಇಡಬೇಕು. ಅಷ್ಟೇ ಅಲ್ಲದೆ, ಪಿರನವಾಡಿಯ ವೃತ್ತಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಇನ್ನು ಈ ವೇಳೆ ಕನ್ನಡ ಪರ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳಿದರು.