ಹುಬ್ಬಳ್ಳಿ :ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೋವಿಡ್ನಿಂದ ಜನತೆ ಅನುಭವಿಸುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಈವರೆಗೆ ಆಕ್ಸಿಜನ್, ವೆಂಟಿಲೇಟರ್, ಬೆಡ್ ಸಮಸ್ಯೆ ಎದುರಿಸಿದ್ದ ಜನರಿಗೆ ಈಗ ವ್ಯಾಕ್ಸಿನ್ ಕೊರತೆ ಉಂಟಾಗುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕೊರತೆ ಎದುರಾಗಿದೆ. ಜನರು ಸಾಲಿನಲ್ಲಿ ನಿಂತು ಲಸಿಕೆಗಾಗಿ ಕಾಯುತ್ತಿದ್ದಾರೆ.
ಗಂಟೆಗಟ್ಟಲೇ ಸಾಲಿನಲ್ಲಿ ನಿಂತರೂ ಜನರಿಗೆ ಲಸಿಕೆ ಸಿಗುತ್ತಿಲ್ಲ. 200 ಜನರಿಗೆ ಮಾತ್ರ ಲಸಿಕೆ ನೀಡಲು ಕಿಮ್ಸ್ ಮುಂದಾಗಿದೆ. ಈ ಮಾಹಿತಿಯನ್ನು ಜನರಿಗೆ ತಲುಪಿಸುವಲ್ಲಿ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಆರೋಗ್ಯಾಧಿಕಾರಿಗಳು ಮೊದಲೇ ಈ ಬಗ್ಗೆ ನಮಗೆ ತಿಳಿಸಿದ್ದರೆ, ನಾವು ಇಲ್ಲಿಯವರೆಗೆ ಬರುತ್ತಿರಲಿಲ್ಲ ಎಂದು ಜನತೆ ಆರೋಗ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.