ಹುಬ್ಬಳ್ಳಿ:ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ನಗರದ ಇಸ್ಕಾನ್ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವೈಕುಂಠ ದ್ವಾರ ಪೂಜೆ, ಲಕ್ಷಾರ್ಚನ ಸೇವೆ, ವೆಂಕಟೇಶ್ವರ ಹೋಮ ಸೇರಿದಂತೆ ಹಲವು ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಕೋವಿಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಆದರೂ ಕೆಲ ಭಕ್ತರು ವಿಶಿಷ್ಟ ರೀತಿಯಲ್ಲಿ ನೃತ್ಯದ ಮೂಲಕ ದೇವರಿಗೆ ಪೂಜೆ- ಪುನಸ್ಕಾರ ಸಲ್ಲಿಸುತ್ತಿದ್ದಾರೆ.