ಧಾರವಾಡ: ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಗುತ್ತಿಗೆ ಆಧಾರದ ಮೇಲೆ 52 ಜನರನ್ನ ನೇಮಕ ಮಾಡಿಕೊಳ್ಳಲು ಹಿಂದಿನ ಕುಲಪತಿಗಳು ಆದೇಶ ಮಾಡಿದ್ದರು. ಆದರೆ ಈ ಆದೇಶ ಬಂದ ಮೇಲೆ ಹಲವರು ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದರು.
ಈ ಹಿನ್ನೆಲೆ ಗುತ್ತಿಗೆ ನೌಕರಿಗಾಗಿ ಅರ್ಜಿ ಸಲ್ಲಿಸಿದ್ದವರು ಕರ್ನಾಟಕ ವಿವಿ ಕುಲಪತಿ ಹಾಗೂ ಕುಲ ಸಚಿವರನ್ನು ಭೇಟಿ ಮಾಡಿ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಇನ್ನು ಈ ನೇಮಕಾತಿ ವೇಳೆ 52 ಜನರ ಬಳಿ ಹಣ ಪಡೆದು ತಮಗೆ ಬೇಕಾದವರಿಗೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ಕೆಲ ಅರ್ಜಿದಾರರು ಆರೋಪ ಮಾಡಿದ್ದಾರೆ.