ಹುಬ್ಬಳ್ಳಿ: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಫೆಬ್ರವರಿ 2ರಂದು, ಹುಬ್ಬಳ್ಳಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ , ಹೆಚ್ಡಿಬಿಆರ್ಟಿಎಸ್ ಹಾಗೂ ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಸ್ಥಳ ಭೇಟಿ ಮಾಡಿ ಪರಿಶೀಲನೆ ನಡೆಸಿತು.
ಫೆ.2ಕ್ಕೆ ಹುಬ್ಬಳ್ಳಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ - ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್
ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಫೆಬ್ರವರಿ 2ರಂದು, ಹುಬ್ಬಳ್ಳಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಧಿಕಾರಿಗಳಿಂದ ಪೂರ್ವ ಸಿದ್ಧತೆ
ದೇಶಪಾಂಡೆ ಫೌಂಡೇಷನ್ನ ಸ್ಕಿಲ್ ಗುರುಕುಲ ಸ್ಟಾರ್ಟ್ ಅಪ್ ಕಾರ್ಯಕ್ರಮ ಹಾಗೂ ಹುಬ್ಬಳ್ಳಿ ಧಾರವಾಡ ಬಿಆರ್ಟಿಎಸ್ ಪ್ರಾಜೆಕ್ಟ್ ಉದ್ಘಾಟನೆ, ನವ ನಗರದ ಬಸ್ ನಿಲ್ದಾಣ ಭೇಟಿ, ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಗ್ರಾಮಾಂತರ ಬಸ್ಗಳ ಕಾರ್ಯಾಚರಣೆ ಪ್ರಾರಂಭಿಸುವ ಕಾರ್ಯಕ್ರಮಗಳ ಸ್ಥಳ , ವೇದಿಕೆ, ಭದ್ರತೆ, ವೈದ್ಯಕೀಯ, ಸಂಚಾರ ವ್ಯವಸ್ಥೆ ಮತ್ತಿತರ ಕಾರ್ಯಕ್ರಮಗಳ ಬಗ್ಗೆ ಸೂಕ್ಷ್ಮ ಪರಿಶೀಲನೆ ನಡೆಸಿದರು.