ಹುಬ್ಬಳ್ಳಿ : ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಎಸಿಪಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಈ ಘಟನೆ ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾಗಿದೆ. ಟ್ರಾಫಿಕ್ ಎಸಿಪಿ ಎಂ ಎಸ್ ಹೊಸಮನಿ ಎಂಬುವರೇ ಪೊಲೀಸ್ ಕಾನ್ಸ್ ಟೇಬಲ್ ಜಗಾಪುರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಠಾಣೆ ಆವರಣದಲ್ಲಿ ಎಲ್ಲರೆದುರು ಎಸಿಪಿ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ಮಾಡಿ ದರ್ಪ ಮೆರೆದಿದ್ದಾರೆ ಎನ್ನಲಾಗಿದೆ.