ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನು ಸಹ ಸಿಬಿಐ ವಶಕ್ಕೆ ಪಡೆದುಕೊಂಡಿದೆ.
ವಿಜಯ್ ಕುಲಕರ್ಣಿ ಸಿಬಿಐ ಬಲೆಗೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ವಿಜಯ್ ಕುಲಕರ್ಣಿಯವರ ನಿವಾಸದಲ್ಲೇ ಅವರನ್ನು ವಶಕೆ ಪಡೆದಿದ್ದು, ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆತರಲಾಗಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಠಾಣೆ ಎದುರು ಜಮಾವಣೆಗೊಂಡಿದ್ದಾರೆ. ಇದೀಗ ಸಹೋದರ ವಿಜಯ್ ಕುಲಕರ್ಣಿ ಅವರನ್ನು ಸಹ ಠಾಣೆಗೆ ಕರೆದೊಯ್ದಿಯ್ದು, ವಿಚಾರಣೆ ತೀವ್ರಗೊಂಡಿದೆ.