ಧಾರವಾಡ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಸದಸ್ಯರು ಹಲವು ಬೇಡಿಕೆಗಳ ಈಡೇರಿಕೆಗಾಗಿ ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯ್ತಿ ನೌಕರರ ಆಗ್ರಹ - ಗ್ರಾಚ್ಯುಟಿ
ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಗ್ರಾಮ ಪಂಚಾಯ್ತಿ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮ ಪಂಚಾಯ್ತಿ ನೌಕರರ ಆಗ್ರಹ
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಗ್ರಾ.ಪಂ. ನೌಕರರು ಕೆಲ ಹೊತ್ತು ಪ್ರತಿಭಟಿಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಗ್ರಾಮ ಪಂಚಾಯ್ತಿ ಎಲ್ಲ ನಿವೃತ್ತ ನೌಕರರಿಗೆ ಸರ್ಕಾರದ ಆದೇಶದಂತೆ 15 ತಿಂಗಳ ಗ್ರಾಚ್ಯುಟಿ ನೀಡಬೇಕು ಎಂದು ಹೇಳಿದ್ರು.
ಗ್ರಾಮ ಪಂಚಾಯ್ತಿಗಳಲ್ಲಿ ಪಂಪ ಆಪರೇಟರ್, ವಾಟರಮನ್, ಸಿಪಾಯಿ ಹಾಗೂ ಸಫಾಯಿ ಕರ್ಮಚಾರಿಗಳಿಗೆ ಕರ ವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು, ಸರ್ಕಾರದ ಆದೇಶದಂತೆ ಅನುಕಂಪದ ನೇಮಕಾತಿ ಮಾಡಲು ನಿರ್ದೇಶನ ನೀಡಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.