ಕರ್ನಾಟಕ

karnataka

ETV Bharat / state

'ಪಾಕಿಸ್ತಾನ ಜಿಂದಾಬಾದ್' ಬರಹ: ಅಪರಾಧಿಗಳನ್ನು ಬಂಧಿಸುವಂತೆ ಗ್ರಾಮಸ್ಥರ ಪ್ರತಿಭಟನೆ - ಬುಡರಸಿಂಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ

ಹುಬ್ಬಳ್ಳಿಯ ಶಾಲೆಯೊಂದರ ಗೋಡೆಯ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಬರಹ ಬರೆದಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಬುಡರಸಿಂಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ರು.

Villagers protest
ಅಪರಾಧಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

By

Published : Feb 24, 2020, 3:28 PM IST

ಹುಬ್ಬಳ್ಳಿ:ಸರ್ಕಾರಿ ಶಾಲೆಯೊಂದರ ಗೋಡೆಯ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಬರಹ ಬರೆದಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಬುಡರಸಿಂಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ರು.

ಅಪರಾಧಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ತಾಲೂಕಿನ ಬುಡರಸಿಂಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಪರಿಚಿತರು ಗೋಡೆಗಳ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದು ದೇಶದ್ರೋಹ ಮಾಡಿದ್ದು ಖಂಡೀಯ ಎಂದು ಆಕ್ರೊಶ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆ ಗೋಡೆ ಮೇಲೆ 'ಪಾಕಿಸ್ತಾನ ಜಿಂದಾಬಾದ್' ಎಂದು ಬರೆದ ದುಷ್ಕರ್ಮಿಗಳು: ಗ್ರಾಮಸ್ಥರ ಆಕ್ರೋಶ

ದೇಶದ್ರೋಹಿಗಳ ವಿರುದ್ಧ ಶಾಲಾ ಆಡಳಿತ ಮಂಡಳಿಯಿಂದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಶಾಲಾ ಆಡಳಿತ ಮಂಡಳಿಯಿಂದ ದೂರು ಪಡೆದ ನಂತರ ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸಬೇಕು, ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

...view details