ಧಾರವಾಡ: ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆ ದಿನವಾದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಮೆರವಣಿಗೆ ಅರ್ಧಕ್ಕೆ ಮೊಟಕುಗೊಳಿಸಿ ನಾಮಪತ್ರ ಸಲ್ಲಿಸಿದರು.
ಮೆರವಣಿಗೆ ಅರ್ಧಕ್ಕೆ ಮೊಟಕುಗೊಳಿಸಿ ವಿನಯ್ ಕುಲಕರ್ಣಿ ಮಾಡಿದ್ದೇನು? - news kannada
ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ನಗರದಲ್ಲಿ ಇಂದು ಟೆಂಪಲ್ ರನ್ ನಡೆಸಿದರು. ಇನ್ನು ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನವಾಗಿದ್ದರಿಂದ ಮೆರವಣಿಗೆ ಅರ್ಧಕ್ಕೆ ಮೊಟಕುಗೊಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಇದಕ್ಕೂ ಮುನ್ನ ಹಳೆ ಎಪಿಎಂಸಿ ಈಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭಿಸಿದ ವಿನಯ ಕುಲಕರ್ಣಿ, ಶಿವಾಜಿ ವೃತ್ತ ಆಗಮಿಸುತ್ತಿದ್ದಂತೆ ಅಲ್ಲಿದ್ದ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದರಿಂದ ಮೆರವಣಿಗೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಅಲ್ಲಿಂದ ಓಡೋಡಿ ಬಂದು ಜಿಲ್ಲಾ ಚುನಾವಣಾಧಿಕಾರಿಗೆ ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆಯಾದ ಬಳಿಕ ಮತ್ತೆ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಮೆರವಣಿಗೆಯಲ್ಲಿ ಎಂಎಲ್ಸಿ ಶ್ರೀನಿವಾಸ ಮಾನೆ, ವಿನೋದ್ ಅಸೂಟಿ, ಇಸ್ಮಾಯಿಲ್ ತಮಟಗಾರ, ಮುಖ್ಯಮಂತ್ರಿ ಕಾರ್ಯದರ್ಶಿ ಎನ್‌ಹೆಚ್. ಕೋನರೆಡ್ಡಿ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು. ಇನ್ನು ಬೆಳಗ್ಗೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ವಿನಯ ಕುಲಕರ್ಣಿ, ವಿಶೇಷ ಪೂಜೆ ಸಲ್ಲಿಸಿದರು.