ಧಾರವಾಡ:ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಆ ಸಮಯ ಬಂದಾಗ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ಊಹಾ ಪೋಹ ಇರಬಹುದು: ಕಟೀಲ್ - Vinay Kulkarni didnot talk with me about joining BJP
ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ನನಗಂತೂ ಸಂಕರ್ಪ ಮಾಡಿಲ್ಲ. ಇದು ಊಹಾ ಪೋಹ ಇರಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಂತೂ ಸಂಕರ್ಪ ಮಾಡಿಲ್ಲ. ಇದು ಊಹಾ ಪೋಹ ಇರಬಹುದು. ಸಿ.ಪಿ. ಯೋಗೇಶ್ವರ್ ನೇತೃತ್ವದಲ್ಲಿ ದೆಹಲಿಯಲ್ಲಿ ಮುಖಂಡರು ಸೇರಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದ್ರು ಇರಬಹುದು ಆ ವಿಚಾರ ಬಂದಾಗ ನೋಡೋಣ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಮಹದಾಯಿ ವಿಚಾರವಾಗಿ ಮತ್ತೆ ಗೋವಾ ಕ್ಯಾತೆ ತೆಗೆದಿರುವ ವಿಷಯಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಾನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕುಳಿತು ಮಾತನಾಡುತ್ತೇವೆ ಎಂದರು.
Last Updated : Oct 8, 2020, 5:19 PM IST