ಮಾಜಿ ಸಚಿವ ವಿನಯ ಕುಲಕರ್ಣಿಗೆ ಡಿಸೆಂಬರ್ 7ರ ವರೆಗೆ ಜೈಲೇ ಗತಿ
14:13 November 23
ವಿನಯ್ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.
ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಡಿ.7 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶಿಸಿದ್ದಾರೆ.
ವಿಡಿಯೋ ಕಾನ್ಪರೆನ್ಸ್ ಮೂಲಕ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ವಿನಯ ಕುಲಕರ್ಣಿ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.