ಧಾರವಾಡ: ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.
ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ - Yogeshgowda murder case
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿಯಾಗಿದೆ. ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ನ್ಯಾಯಾಂಗ ಬಂಧನ ವಿಸ್ತರಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿ
ವಿನಯ್ಗೆ ಫೆ. 4ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಈಗಾಗಲೇ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿದ್ದಾರೆ.
ವಿನಯ್ ಸೋದರ ಮಾವ ಚಂದ್ರಶೇಖರ್ ಇಂಡಿಯ ನ್ಯಾಯಾಂಗ ಬಂಧನ ಸಹ ವಿಸ್ತರಣೆಯಾಗಿದೆ. ಹಂತಕರಿಗೆ ಶಸ್ತ್ರಾಸ್ತ್ರ ಪೂರೈಸಿದ ಆರೋಪದಲ್ಲಿ ಬಂಧನವಾಗಿರುವ ಚಂದ್ರಶೇಖರ್ ಇಂಡಿ ಸಹ ಜೈಲಿನಲ್ಲಿದ್ದಾರೆ.