ಹುಬ್ಬಳ್ಳಿ:75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 3 ಕೋಟಿ ರೂ. ವೆಚ್ಚ ಖಾದಿ ಧ್ವಜ ಖರೀದಿ ಹಾಗೂ ಖಾದಿ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿ ಬೆಳೆಸಲು ಹುಬ್ಬಳ್ಳಿ-ಧಾರವಾಡದಲ್ಲಿನ ಖಾದಿ ಉದ್ಯೋಗ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿರುವುದಾಗಿ ರಾಷ್ಟ್ರೀಯ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಅಧ್ಯಕ್ಷ ವಿನಯ್ ಕುಮಾರ್ ಸಕ್ಸೆನಾ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆದೇಶ ಹಾಗೂ ನಿರ್ದೇಶನದ ಮೇರೆಗೆ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 3 ಕೋಟಿ ರೂ. ವೆಚ್ಚದ ಧ್ವಜ ತಯಾರಿಸುವದರ ಬಗ್ಗೆ ಚಿಂತನೆ ನಡೆಸಲಾಗಿದೆ. ಕೊರೊನಾ ಮಹಾಮಾರಿಯಿಂದ ಅದೆಷ್ಟೋ ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ನಂಬಿ ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಲು ಸಂಸ್ಥೆ ಸನ್ನದ್ಧವಾಗಿದೆ. ಇನ್ನೂ ಹೆಚ್ಚು ಹೆಚ್ಚು ಖಾದಿ ಉತ್ಪಾದನೆ ಮಾಡಲು ಸೂಚನೆ ನೀಡಲಾಗಿದೆ ಎಂದರು.