ಯೋಗೇಶ್ ಗೌಡ ಕೊಲೆ ಪ್ರಕರಣ: ನಾಳೆ ವಿನಯ ಕುಲಕರ್ಣಿ ಭವಿಷ್ಯ ನಿರ್ಧಾರ - Vinaya Kulkarni arrested in Yogesh Gowda murder case
11:50 November 18
ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.
ಸಿಬಿಐ ಇಂದು ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.
ಜಾಮೀನು ಕೋರಿ ವಿನಯ ಕುಲಕರ್ಣಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಧಾರವಾಡದ 3 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ.