ಹುಬ್ಬಳ್ಳಿ:ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಸಲ್ಲಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಉಪ ಚುನಾವಣೆ: ಮತಗಟ್ಟೆಗೆ ಪೂಜೆ ಸಲ್ಲಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಕೈ, ಕಮಲ ಕಾರ್ಯಕರ್ತರು - Avv
ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಸಲ್ಲಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಉಪ ಚುನಾವಣೆ ವೇಳೆ ಮತಗಟ್ಟೆಗೆ ಪೂಜೆ
ಅದರಗುಂಚಿ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 63, 64, 65ರಲ್ಲಿ ಪೂಜೆ ಸಲ್ಲಿಸಲಾಗಿದೆ. ಅಲ್ಲದೇ ಕುಂದಗೋಳ ವಿಧಾನಸಭಾ ಕ್ಷೇತ್ರದ ಯರಗುಪ್ಪಿ ಗ್ರಾಮದ ಮತಗಟ್ಟೆ ಸಂಖ್ಯೆ 25 ರಲ್ಲಿ ಕೂಡ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ, ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವಿಗೆ ಮತಗಟ್ಟೆಗೆ ವಿಭೂತಿ ಕುಂಕುಮ ಹಚ್ಚಿ, ತೆಂಗಿನಕಾಯಿ ಒಡೆದು, ಮತಗಟ್ಟೆಯ ಬಾಗಿಲಿಗೆ ಅರಿಷಿಣ, ಕುಂಕುಮ ಏರಿಸಿ ಪೂಜೆ ಮಾಡಿದ್ದಾರೆ.
ಉಪ ಚುನಾವಣೆ ವೇಳೆ ಮತಗಟ್ಟೆಗೆ ಪೂಜೆ
ಚುನಾವಣಾ ಆಯೋಗದ ನಿಯಮದ ಪ್ರಕಾರ ಮತಗಟ್ಟೆಗೆ ಪೂಜೆ ಪುನಸ್ಕಾರ ಮಾಡುವಂತಿಲ್ಲ.ಇದೀಗ ಪೂಜೆ ಮಾಡುವ ಮೂಲಕ ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
TAGGED:
Avv