ಕರ್ನಾಟಕ

karnataka

ETV Bharat / state

ವಂದೇ ಭಾರತ್ ರೈಲಿನ ಸಮಯಕ್ಕೆ ತಕ್ಕಂತೆ ಹುಬ್ಬಳ್ಳಿ - ಬೆಳಗಾವಿ ನಡುವೆ ವೋಲ್ವೊ ಬಸ್ ಸೌಲಭ್ಯ..

ವಂದೇ ಭಾರತ್ ರೈಲಿನ ಸಮಯಕ್ಕೆ ತಕ್ಕಂತೆ ಹುಬ್ಬಳ್ಳಿ - ಬೆಳಗಾವಿ ನಡುವೆ ವೋಲ್ವೋ ಬಸ್ ಸೌಲಭ್ಯ

Vande Bharat
ವಂದೇ ಭಾರತ್ ರೈಲಿನ ಸಮಯಕ್ಕೆ ತಕ್ಕಂತೆ ಹುಬ್ಬಳ್ಳಿ-ಬೆಳಗಾವಿ ನಡುವೆ ವೋಲ್ವೊ ಬಸ್ ಸೌಲಭ್ಯ

By

Published : Jul 3, 2023, 8:31 PM IST

ಹುಬ್ಬಳ್ಳಿ:ಬೆಂಗಳೂರು - ಧಾರವಾಡ ನಡುವೆ ಹೊಸದಾಗಿ ಆರಂಭವಾಗಿರುವ "ವಂದೇ ಭಾರತ್" ರೈಲಿನ ಸಮಯಕ್ಕೆ ಹೊಂದಾಣಿಕೆ ಆಗುವಂತೆ ಹುಬ್ಬಳ್ಳಿ ರೈಲ್ವೆ ನಿಲ್ದಾಣ - ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ನಡುವೆ ವೋಲ್ವೊ ಬಸ್ ಹಾಗೂ ಧಾರವಾಡ ರೈಲು ನಿಲ್ದಾಣ - ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ನಡುವೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಳಗಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕ ಪ್ರಯಾಣಿಕರಿಗೆ ಬೆಂಗಳೂರು ಧಾರವಾಡ ನಡುವೆ ಆರಂಭಿಸಲಾಗಿರುವ "ವಂದೇ ಭಾರತ್" ರೈಲಿನಲ್ಲಿ ಪ್ರಯಾಣ ಮಾಡಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಮಲ್ಟಿ ಆ್ಯಕ್ಸೆಲ್ ವೋಲ್ವೊ ಎಸಿ ಬಸ್ ಹಾಗೂ ಧಾರವಾಡ ರೈಲು ನಿಲ್ದಾಣಕ್ಕೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ರೈಲಿನ ಆಗಮನ - ನಿರ್ಗಮನ ಸಮಯಕ್ಕೆ ಅನುಗುಣವಾಗಿ ಈ ಬಸ್​​​​ಗಳು ವೇಳಾಪಟ್ಟಿ ನಿಗದಿಪಡಿಸಲಾಗಿದೆ.

ವೋಲ್ವೊ ಎಸಿ ಬಸ್ ಸೌಲಭ್ಯ:ಒಂದು ಬಸ್ಸು ಹುಬ್ಬಳ್ಳಿ ರೈಲು ನಿಲ್ದಾಣದಿಂದ ಬೆಳಗ್ಗೆ 11-30ಕ್ಕೆ ಹೊರಡುತ್ತದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಮಧ್ಯಾಹ್ನ 1-30ಕ್ಕೆ ತಲುಪುತ್ತದೆ. ಇನ್ನೊಂದು ಬಸ್​ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಬೆಳಗ್ಗೆ 11-00 ಕ್ಕೆ ಹೊರಡುತ್ತದೆ. ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಮಧ್ಯಾಹ್ನ 1-10ಕ್ಕೆ ಆಗಮಿಸಲಿದೆ. ಪ್ರಯಾಣ ದರ ರೂ.180 ನಿಗದಿಪಡಿಸಲಾಗಿದೆ.

ರಾಜಹಂಸ ಬಸ್ ಸೌಲಭ್ಯ:ಒಂದು ಬಸ್​ ಧಾರವಾಡ ರೈಲು ನಿಲ್ದಾಣದಿಂದ ಮಧ್ಯಾಹ್ನ 12-25ಕ್ಕೆ ಹೊರಡುತ್ತದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ 1-55ಕ್ಕೆ ತಲುಪುತ್ತದೆ. ಇನ್ನೊಂದು ಬಸ್ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಬೆಳಗ್ಗೆ 11-20ಕ್ಕೆ ಹೊರಡುತ್ತದೆ. ಧಾರವಾಡ ರೈಲು ನಿಲ್ದಾಣಕ್ಕೆ ಮಧ್ಯಾಹ್ನ 12-50ಕ್ಕೆ ಆಗಮಿಸಲಿದೆ. ಪ್ರಯಾಣ ದರ 135 ರೂ. ನಿಗದಿಪಡಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಈ ವಿಶೇಷ ಬಸ್​ಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಎನ್​ಡಬ್ಲೂಕೆಆರ್​ಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮನಗೌಡ ಅವರು ಪ್ರಕರಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ:ಬೆಂಗಳೂರು - ಧಾರವಾಡ ನಡುವೆ ಸಂಚರಿಸಲಿರುವ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದ ಭೋಪಾಲ್​ನ ರಾಣಿ ಕಮಲಪತಿ ರೈಲು ನಿಲ್ದಾಣದಿಂದ ಇತ್ತೀಚೆಗೆ ವರ್ಚುಯಲ್​ ಮೂಲಕ ಚಾಲನೆ ನೀಡಿದ್ದರು. ಜೊತೆಗೆ ಇತರ ನಾಲ್ಕು ವಂದೇ ಭಾರತ್​ ರೈಲುಗಳಿಗೂ ಚಾಲನೆ ಕೊಟ್ಟಿದ್ದರು.

ಬೆಂಗಳೂರು - ಧಾರವಾಡ, ಭೋಪಾಲ್​​ - ಜಬಲ್​ಪುರ್​, ಖಜೂರಾಹೊ - ಭೋಪಾಲ್​-ಇಂದೋರ್​, ಮಡಗಾಂ - ಮುಂಬೈ, ಹತಿಯಾ - ಪಾಟ್ನಾ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದರು. ಈ ಮೂಲಕ ದೇಶದಲ್ಲಿ ಒಟ್ಟು 23 ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲುಗಳು ಕಾರ್ಯಾಚರಣೆ ಆರಂಭಿಸಿವೆ. ಬೆಂಗಳೂರು - ಧಾರವಾಡ ರೈಲು ​ಕರ್ನಾಟಕದ ಎರಡನೇಯ ವಂದೇ ಭಾರತ್​ ಎಕ್ಸ್​ ಪ್ರೆಸ್ ಆಗಿರುವುದು ವಿಶೇಷವಾಗಿದೆ.

ಇದನ್ನೂ ಓದಿ:Vande Bharat Express : ಬೆಂಗಳೂರು-ಧಾರವಾಡ ಸೇರಿ ಐದು ಹೊಸ ವಂದೇ ಭಾರತ್​ ಎಕ್ಸ್​​ಪ್ರೆಸ್​ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ABOUT THE AUTHOR

...view details