ಹುಬ್ಬಳ್ಳಿ: ಆ್ಯಪ್ ಮೂಲಕ ಮತದಾರರ ಮಾಹಿತಿ ಸಂಗ್ರಹ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಮಾಹಿತಿ ಸಂಗ್ರಹ ಮಾಡುತ್ತಿದ್ದವರ ಲ್ಯಾಪ್ ಟಾಪ್ ಅನ್ನು ನಗರದ ಚೆನ್ನಮ್ಮ ವೃತ್ತದ ಲಾಡ್ಜ್ನಲ್ಲಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಕಳೆದ ಎರಡು ದಿನಗಳ ಹಿಂದೆ ವಿರೇಶ್, ಮಂಜುನಾಥ್ ಹಾಗೂ ನಿತೀಶ್ ಎಂಬ ಮೂವರ ವಿರುದ್ಧ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ತನಿಖೆ ನಡೆಸಿರುವ ಹಳೆ ಹುಬ್ಬಳ್ಳಿ ಪೊಲೀಸರು ಮಾಹಿತಿ ಸಂಗ್ರಹ ಮಾಡಲು ಬಂದಿದ್ದ ಮೂವರು ತಂಗಿದ್ದ ಲಾಡ್ಜ್ನಲ್ಲಿ ಲ್ಯಾಪ್ಟಾಪ್ ವಶಕ್ಕೆ ಪಡೆದಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.