ಕರ್ನಾಟಕ

karnataka

ETV Bharat / state

ಮಳೆಗೆ ಗೋಡೆ ಕುಸಿತ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ - Wall collapses due to rain

ಧಾರವಾಡ: ತಾಲೂಕಿನ ಬೋಗೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಮಕ್ಕಳು ಮಲಗಿದ್ದ ವೇಳೆ ಮನೆಯ ಗೋಡೆ ಮಕ್ಕಳ ಮೇಲೆ ಬಿದ್ದಿದೆ. ಇದರಿಂದ 2 ವರ್ಷದ ವಿಶ್ವನಾಥ್ ಕುರಿ ಮತ್ತು 4 ವರ್ಷದ ಯಲ್ಲಪ್ಪ ಕುರಿ ಎಂಬ ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯಗಳಾಗಿವೆ.

ಇಬ್ಬರು ಮಕ್ಕಳಿಗೆ ಗಂಭೀರ ಗಾಯ
ಇಬ್ಬರು ಮಕ್ಕಳಿಗೆ ಗಂಭೀರ ಗಾಯ

By

Published : Aug 7, 2020, 10:26 PM IST

ಧಾರವಾಡ: ತಾಲೂಕಿನ ಬೋಗೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಮಳೆಯ ಹೊಡೆತಕ್ಕೆ ಮನೆಯ ಗೋಡೆಯೊಂದು ಕುಸಿದು ಬಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಹಲವಾರು ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದಿವೆ. ನಿನ್ನೆ ರಾತ್ರಿ ಮಕ್ಕಳು ಮಲಗಿದ್ದ ವೇಳೆ ಮನೆಯ ಗೋಡೆ ಮಕ್ಕಳ ಮೇಲೆ ಬಿದ್ದಿದೆ. ಇದರಿಂದ 2 ವರ್ಷದ ವಿಶ್ವನಾಥ್ ಕುರಿ ಮತ್ತು 4 ವರ್ಷದ ಯಲ್ಲಪ್ಪ ಕುರಿ ಎಂಬ ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯಗಳಾಗಿವೆ.

ಇಬ್ಬರು ಮಕ್ಕಳ ಪೈಕಿ 4 ವರ್ಷದ ವಿಶ್ವನಾಥ್​ನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಬಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details