ಹುಬ್ಬಳ್ಳಿ :ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ - Hubli Protest News
ದುಡಿತಕ್ಕೆ ತಕ್ಕಂತೆ ವೇತನ ಸಿಗದೇ ಹೈರಾಣಾಗಿದ್ದು, ಸರ್ಕಾರ ಕೂಡಲೇ ಗೌರವಧನ ಹಾಗೂ ಪ್ರೋತ್ಸಾಹ ಧನ ಎರಡನ್ನೂ ಸೇರಿಸಿ ಮಾಸಿಕ ಕನಿಷ್ಠ 12,000 ರೂಪಾಯಿ ವೇತನ ನೀಡಬೇಕು..
ಕೊರೊನಾ ಸಂದರ್ಭದಲ್ಲಿ ತಮ್ಮ ಜೀವನವನ್ನು ಪಣಕಿಟ್ಟು ಹೋರಾಟ ಮಾಡುತ್ತಿದ್ದು, ಸರ್ಕಾರ ನೀಡುತ್ತಿರುವ ಗೌರವಧನ ಕುಟುಂಬ ನಿರ್ವಹಣೆ ಮಾಡಲು ಸಾಲುತ್ತಿಲ್ಲ. ಕೊರೊನಾ ನಿಯಂತ್ರಿಸುವುದರಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಿಸಿಕೊಳ್ಳಲು ಅಗತ್ಯ ಆರೋಗ್ಯ ಕವಚಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡಬೇಕು. ದುಡಿತಕ್ಕೆ ತಕ್ಕಂತೆ ವೇತನ ಸಿಗದೇ ಹೈರಾಣಾಗಿದ್ದು, ಸರ್ಕಾರ ಕೂಡಲೇ ಗೌರವಧನ ಹಾಗೂ ಪ್ರೋತ್ಸಾಹ ಧನ ಎರಡನ್ನೂ ಸೇರಿಸಿ ಮಾಸಿಕ ಕನಿಷ್ಠ 12,000 ರೂಪಾಯಿ ವೇತನ ನೀಡಬೇಕು ಒತ್ತಾಯಿಸಿದರು.
ಕಳೆದ 20 ದಿನಗಳಿಂದ ರಾಜ್ಯದಲ್ಲಿ ನಿರಂತರ ಹೋರಾಟ ಮಾಡಿದರೂ ಸಹ ಸರ್ಕಾರ ಯಾವುದೇ ದಿಟ್ಟ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ, ಆದಷ್ಟು ಬೇಗ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ತಹಶೀಲ್ದಾರ್‌ರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.