ಹುಬ್ಬಳ್ಳಿ:ಕಾಂಗ್ರೆಸ್ನಿಂದ ಬಿಜೆಪಿಗೆ ಬಂದವರು ಸ್ವ ಪಕ್ಷಕ್ಕೆ ಮರಳುತ್ತಾರೆ ಎಂಬುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಭ್ರಮೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಡಿಕೆಶಿಗೆ ತಿರುಗೇಟು ನೀಡಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿದ್ದವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ಗೆ ಮರಳುವುದಿಲ್ಲ. ಜೀವನ ಪರ್ಯಂತ ನಾವು ಬಿಜೆಪಿಯಲ್ಲಿಯೇ ಇರುತ್ತೇವೆ. ಬಿಜೆಪಿಯೇ ನಮ್ಮ ಪಕ್ಷ ಎಂದರು.
ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಲು ಅವರೇನು ಜ್ಯೋತಿಷ್ಯರಾ? ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯರಾದರು? ಇನ್ನುಳಿದ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದರು.
ಓದಿ: ಪಕೋಡಾ ಬಿಜೆಪಿ ಸರ್ಕಾರದಿಂದ ಯುವಕರಿಗೆ ದ್ರೋಹ: ರಾಜ್ಯ ಕಾಂಗ್ರೆಸ್ ಕಿಡಿ
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಟಿದ್ದು, ಬೇರೆ ಪಕ್ಷದಿಂದ ಬಂದವರಿಗೆ ಸಚಿವ ಸ್ಥಾನ ನೀಡುವಂತೆ ನಾವೂ ಸಹ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇವೆ. ಯಾರಿಗೂ ಅನ್ಯಾಯವಾಗುವದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.