ಕರ್ನಾಟಕ

karnataka

ETV Bharat / state

ಪರಮೇಶ್ವರ್​ ಪಿಎ ಆತ್ಮಹತ್ಯೆ ಪ್ರಕರಣ: ಗೃಹ ಸಚಿವ ಬೊಮ್ಮಾಯಿ ಹೇಳಿದ್ದೇನು? - ಗೃಹ ಸಚಿವ ಬಸವರಾಜ ಬೊಮ್ಮಾಯಿ,

ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರ ಪಿಎ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಪಿಎ ಆತ್ಮಹತ್ಯೆ ಬಗ್ಗೆ ಪೊಲೀಸ್ ಇಲಾಖೆ ತನಿಖೆ‌ ನಡೆಸುತ್ತಿದೆ. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ರಮೇಶ್ ಫೋನ್​ ಕರೆಗಳು, ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ತನಿಖೆ ಆಗುತ್ತಿದೆ ಎಂದು ಹೇಳಿದ್ದಾರೆ.

Basavaraja bommi

By

Published : Oct 13, 2019, 12:34 PM IST

ಹುಬ್ಬಳ್ಳಿ:ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್​ ಆತ್ಮಹತ್ಯೆ ಪ್ರಕರಣದ ಬಗ್ಗೆ ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ತಿಳಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಡಿಸಿಎಂ ಜಿ. ಪರಮೇಶ್ವರ್ ಪಿಎ ಆತ್ಮಹತ್ಯೆ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ತನಿಖೆ‌ ನಡೆಸುತ್ತಿದೆ. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರಮೇಶ್ ಫೋನ್​ ಕರೆಗಳು, ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ತನಿಖೆ ಆಗುತ್ತಿದೆ. ಅವರ ಸಾವಿನ ಬಗ್ಗೆ ಸ್ವತಃ ಜಿ. ಪರಮೇಶ್ವರ್ ಈಗಾಗಲೇ ಹೇಳಿಕೆ ನೀಡಿದ್ದು, ಪ್ರಕರಣವನ್ನು ಯಾರೂ ರಾಜಕೀಕರಣ ಮಾಡಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಇಲ್ಲವೆಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ABOUT THE AUTHOR

...view details