ಕರ್ನಾಟಕ

karnataka

ETV Bharat / state

ಸೇನೆಯಲ್ಲಿ ಸೇವೆ ಸಲ್ಲಿಸಿ ಗ್ರಾಮಕ್ಕೆ ವಾಪಸಾದ ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ - ಧಾರವಾಡದ ತಾಲೂಕಿನ ತಡಕೋಡ ಖಾನಾಪುರ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಗ್ರಾಮಕ್ಕೆ ಮರಳಿದ ಸೈನಿಕನಿಗೆ ಗ್ರಾಮಸ್ಥರು ಮೆರವಣಿಗೆ ಮಾಡಿ ಸ್ವಾಗತಿಸಿದ್ದಾರೆ.

welcome-to-the-warrior-in-villege
ಸೇನೆಯಲ್ಲಿ ಸೇವೆ ಸಲ್ಲಿಸಿ ಗ್ರಾಮಕ್ಕೆ ವಾಪಸ್ಸಾದ ಯೋಧನಿಗೆ ಅದ್ದೂರಿ ಸ್ವಾಗತ

By

Published : Feb 25, 2021, 10:13 PM IST

ಧಾರವಾಡ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಗ್ರಾಮಕ್ಕೆ ವಾಪಸಾದ ನಿವೃತ್ತ ಯೋಧನಿಗೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಸಿದ್ದಪ್ಪ 20 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಲೂಕಿನ ತಡಕೋಡ ಖಾನಾಪುರ ಗ್ರಾಮಕ್ಕೆ ವಾಪಸಾದರು. ಶಿವರುದ್ರಪ್ಪ ಹಾಗೂ ಗಂಗವ್ವ ದಂಪತಿ ನಾಲ್ಕನೇ ಮಗ ಸಿದ್ದಪ್ಪ ಪಿಯುಸಿ ಮುಗಿಯುತ್ತಿದ್ದಂತೆ ಭಾರತೀಯ ಸೇನೆಗೆ ಆಯ್ಕೆಯಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಜನ್ಮ ನೀಡಿದ ತಂದೆಯನ್ನು ಕಳೆದುಕೊಂಡ ಸಿದ್ದಪ್ಪ, ಸೇನೆ ಸೇರಿಕೊಂಡಿದ್ದರು.

ಸೇನೆಯಲ್ಲಿ ಸೇವೆ ಸಲ್ಲಿಸಿ ಗ್ರಾಮಕ್ಕೆ ವಾಪಸಾದ ಯೋಧನಿಗೆ ಅದ್ಧೂರಿ ಸ್ವಾಗತ

ದೇಶದ ವಿವಿಧ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಂತ ಗ್ರಾಮಕ್ಕೆ ಆಗಮಿಸಿದ ಯೋಧನಿಗೆ ಗ್ರಾಮದ ಶಾಲಾ ಮಕ್ಕಳು ಅದ್ಧೂರಿಯಾಗಿ ಸ್ವಾಗತಿಸಿದರು. ಗ್ರಾಮದ ಮಹಿಳೆಯರು ಆರತಿ ಬೆಳಗಿದ ಬಳಿಕ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಸಿದ್ದಪ್ಪ ಜೊತೆ ಸೆಲ್ಫಿ ತೆಗೆಸಿಕೊಂಡು ಖುಷಿಪಟ್ಟರು.

ABOUT THE AUTHOR

...view details