ಕರ್ನಾಟಕ

karnataka

By

Published : Dec 24, 2022, 3:13 PM IST

Updated : Dec 24, 2022, 8:04 PM IST

ETV Bharat / state

ಪಾದಯಾತ್ರೆ ನಡೆಸಿದಲ್ಲೆಲ್ಲಾ ಕಾಂಗ್ರೆಸ್​ಗೆ ಸೋಲು : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

ಪಾದಯಾತ್ರೆಯೇ ಕಾಂಗ್ರೆಸ್​ಗೆ ಶಾಪ- ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜನಪರ ಆಡಳಿತ- ಭರ್ಜರಿ ಬಹುಮತದೊಂದಿಗೆ ಮತ್ತೆ ಗೆಲ್ಲುತ್ತೇವೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ

Union Minister Prahlad Joshi
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ:ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ಯಾವುದೇ ನೈತಿಕತೆ ಇಲ್ಲಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಸಿಎಂ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಕುಡಿಯುವ ನೀರಿಗಾಗಿ ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್‌ಗೆ ಪರಿಪರಿಯಾಗಿ ಬೇಡಿಕೊಂಡೆವು. ಯೋಜನೆ ಜಾರಿಗೆ ಕೊನೆಯ ಹಂತದ ತೀರ್ಮಾನ ತೆಗೆದುಕೊಳ್ಳಲು ಸಜ್ಜಾಗಿದ್ದೇವೆ. ಒಗ್ಗರಣೆ ಹಾಕಿ ಅಡುಗೆ ಮಾಡುವವರು ನಾವೇ, ಕೊನೆಯಲ್ಲಿ ನಾವು ಮಾಡಿದ್ದು ಅನ್ನುವುದು ಕಾಂಗ್ರೆಸ್ ಅಭ್ಯಾಸ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪಾದಯಾತ್ರೆ:ಕೋವಿಡ್ ಹೆಸರಲ್ಲಿ ಕಾಂಗ್ರೆಸ್ ಪಾದಯಾತ್ರೆಯನ್ನು ಬಿಜೆಪಿ ತಡೆಯುತ್ತಿದೆ ಎಂದು ಆರೋಪ ಮಾಡಲಾಗುತ್ತಿದೆ. ಯಾತ್ರೆ ಯಶಸ್ವಿಯಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಯಾಕೆ ಅಂದರೆ ಪಾದಯಾತ್ರೆ ನಡೆದಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತದೆ. ಹೀಗಾಗಿ ಕೋವಿಡ್ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸುತ್ತಿದೆ ಎಂದು ಜೋಶಿ ತಿಳಿಸಿದರು.

ಮತ್ತೆ ಬಿಜೆಪಿಗೆ ಬಹುಮತ:ಬೊಮ್ಮಾಯಿ ನೇತೃತ್ವದಲ್ಲಿ ಜನಪರ ಆಡಳಿತ ಕೊಡುತ್ತಿದ್ದೇವೆ. ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಥಂಬಿಂಗ್ ಮೇಜಾರಿಟಿಯಲ್ಲಿ ಮತ್ತೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂಓದಿ:ಸೋಮವಾರ ಸಂಜೆ ನಾನು ದೆಹಲಿಗೆ ಹೋಗ್ತಿರೋದು ನಿಜ: ಸಿಎಂ ಬೊಮ್ಮಾಯಿ

Last Updated : Dec 24, 2022, 8:04 PM IST

ABOUT THE AUTHOR

...view details