ಕರ್ನಾಟಕ

karnataka

ETV Bharat / state

ಸ್ನೇಹ, ಸಲುಗೆ.. ಮಾಯಾಂಗಿನಿಯ ನಗ್ನ ದರ್ಶನಕ್ಕೆ 20 ಲಕ್ಷ ಕಳ್ಕೊಂಡ ನಿವೃತ್ತ ಪ್ರಾಧ್ಯಾಪಕ

ಮಹಿಳೆಯೊಬ್ಬರು ನಿವೃತ್ತ ಪ್ರಾಧ್ಯಾಪಕರ ಜೊತೆ ಸಲುಗೆ ಬೆಳೆಸಿಕೊಂಡು ಬಳಿಕ ಬರೋಬ್ಬರಿ 21 ಲಕ್ಷ ರೂಪಾಯಿ ವಂಚಿಸಿರುವ ಕುರಿತು ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By

Published : Oct 13, 2022, 1:02 PM IST

cheating case
ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆ

ಹುಬ್ಬಳ್ಳಿ: ನಿವೃತ್ತ ಪ್ರಾಧ್ಯಾಪಕರೊಬ್ಬರ ಜೊತೆ ಸಲುಗೆ ಬೆಳೆಸಿಕೊಂಡು ಬಳಿಕ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಮಹಿಳೆಯೊಬ್ಬರು ಬ್ಲಾಕ್‌ಮೇಲ್ ಮಾಡಿ ಬರೋಬ್ಬರಿ 21 ಲಕ್ಷ ರೂ. ದೋಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಂಜಲಿ ಶರ್ಮಾ ಎಂಬುವರು ಧಾರವಾಡದ ಪ್ರಾಧ್ಯಾಪಕರೊಬ್ಬರಿಗೆ ವಾಟ್ಸ್‌ಆ್ಯಪ್ ವಿಡಿಯೋ ಕರೆ ಮೂಲಕ ಪರಿಚಯವಾಗಿದ್ದರು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಸಲುಗೆಗೆ ತಿರುಗಿತ್ತು. ವಾಟ್ಸ್‌ಆ್ಯಪ್‌ನಲ್ಲಿ ಇಬ್ಬರೂ ತಮ್ಮ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ವಿನಿಮಯ ಮಾಡಿಕೊಂಡಿದ್ದರು. ವಿಡಿಯೋ ಕಾಲ್‌ನಲ್ಲಿಯೂ ಮಾತನಾಡಿದ್ದರು.

ಕೆಲ ದಿನಗಳ ನಂತರ ಅಂಜಲಿ ಪ್ರಾಧ್ಯಾಪಕರ ಖಾಸಗಿ ವಿಡಿಯೋ, ಫೋಟೋ ಮತ್ತು ವಿಡಿಯೋ ಕರೆಯ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ, 3 ಲಕ್ಷ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ್ದಾಳೆ. ನಂತರ, ಆಕೆಯ ಸಹಚರ ವಿಕ್ರಂ ಎಂಬಾತ ತಾನು ಸೈಬರ್ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಪ್ರಾಧ್ಯಾಪಕರಿಗೆ ಕರೆ ಮಾಡಿದ್ದಾನೆ.

ಇದನ್ನೂ ಓದಿ:ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ: ಆರೋಪಿ ಬಂಧನ

ನಿಮಗೆ ಬ್ಲಾಕ್‌ಮೇಲ್ ಮಾಡಿರುವ ಅಂಜಲಿ ನನಗೆ ಪರಿಚಯವಿದ್ದು, ನಿಮ್ಮ ಫೋಟೋ ಮತ್ತು ವಿಡಿಯೋಗಳನ್ನು ಡಿಲಿಟ್ ಮಾಡಿಸುತ್ತೇನೆ. ಅದಕ್ಕಾಗಿ ನನಗೆ 5 ಲಕ್ಷ ಕೊಡಬೇಕು ಎಂದಿದ್ದಾನೆ. ಪ್ರಾಧ್ಯಾಪಕರ ಬ್ಯಾಂಕ್ ಖಾತೆಯ ವಿವರ ಪಡೆದು, ಆನ್‌ಲೈನ್‌ನಲ್ಲಿ ಹಂತ ಹಂತವಾಗಿ 21 ಲಕ್ಷವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details