ಕರ್ನಾಟಕ

karnataka

ETV Bharat / state

ಆ್ಯಂಬುಲೆನ್ಸ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ! - birth to baby in ambulance

ಆ್ಯಂಬುಲೆನ್ಸ್‌ನಲ್ಲೇ ಗರ್ಭಿಣಿ ಮಹಿಳೆಗೆ ಹೆರಿಗೆಯಾದ ಘಟನೆ ಧಾರವಾಡದದಲ್ಲಿ ನಡೆದಿದೆ. ಆ್ಯಂಬುಲೆನ್ಸ್‌​ ಸಿಬ್ಬಂದಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.

Woman gives birth to baby in ambulance
ಆಂಬ್ಯುಲೆನ್ಸ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಗರ್ಭಿಣಿ

By

Published : Sep 24, 2020, 8:34 PM IST

ಧಾರವಾಡ:ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಗರ್ಭಿಣಿಯೊಬ್ಬಳು ಆ್ಯಂಬುಲೆನ್ಸ್​​​ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಧಾರವಾಡದ ಹೈಕೋರ್ಟ್ ಬಳಿ‌ ನಡೆದಿದೆ.

ಧಾರವಾಡ ತಾಲೂಕಿನ ಮದಿಕೊಪ್ಪ ಗ್ರಾಮದ ಸುಮಿತ್ರಾ ಶಿಗಳ್ಳಿ ಎಂಬ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ಸೇರಿಸಲು ಕರೆದೊಯ್ಯಲಾಗುತ್ತಿತ್ತು. ಆದ್ರೆ ಮಾರ್ಗಮಧ್ಯೆದಲ್ಲಿಯೇ ಮುದ್ದಾದ ಗಂಡು‌ ಮಗುವಿಗೆ ಜನ್ಮ ನೀಡಿದ್ದಾಳೆ.

ಆ್ಯಂಬುಲೆನ್ಸ್​​ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಆ್ಯಂಬುಲೆನ್ಸ್​​​​​ ಸಿಬ್ಬಂದಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ABOUT THE AUTHOR

...view details