ಕರ್ನಾಟಕ

karnataka

ETV Bharat / state

ರಸ್ತೆ ಅಪಘಾತ: ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಕಾಂಗ್ರೆಸ್ ಮುಖಂಡ - ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ

ರಸ್ತೆ ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಕಾಂಗ್ರೆಸ್​ ಮುಖಂಡ ಅನೀಲಕುಮಾರ್ ಪಾಟೀಲ್ ಆಸ್ಪತ್ರೆಗೆ ದಾಖಲಿಸಿದರು.

ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ
ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ

By

Published : May 7, 2021, 7:06 AM IST

ಹುಬ್ಬಳ್ಳಿ: ಬೈಕ್​ ಸ್ಕಿಡ್​ ಆಗಿ ರಸ್ತೆಗೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರೂರ ಬಳಿ ನಡೆಯಿತು. ಈ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದ ಕಾಂಗ್ರೆಸ್​ ಮುಖಂಡ ಅನೀಲಕುಮಾರ್ ಪಾಟೀಲ್ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.

ರಸ್ತೆ ಅಪಘಾತದಲ್ಲಿ ಗಾಯಗೊಂಡ ಮಹಿಳೆ

ಹುಬ್ಬಳ್ಳಿಯ ನೇಕಾರ ನಗರದ ನಿವಾಸಿಯಾದ ಶಂಕ್ರಮ್ಮ ಸವಣೂರ ಕೋರ್ಟ್‌ನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ಬೈಕ್‌ನಲ್ಲಿ ಬರುವಾಗ ಸ್ಕಿಡ್ ಆಗಿ ಬಿದ್ದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದರು. ಇದನ್ನು ಕಂಡ ಕಾಂಗ್ರೆಸ್ ಮುಖಂಡ ತಮ್ಮ ವಾಹನದಲ್ಲಿಯೇ ಮಹಿಳೆಯನ್ನು ಕೂರಿಸಿಕೊಂಡು ಆಸ್ಪತ್ರೆಗೆ ದಾಖಲಿಸಿದರು.

ಇದನ್ನೂ ಓದಿ: ಖಾಕಿ ಎಂದ್ರೆ ಬರಿ ಹೊಡಿಬಡಿ ಅಲ್ಲಾ: ಇಲ್ಲಿದ್ದಾರೆ ನೋಡಿ ಬಡವರ ಹೊಟ್ಟೆ ತುಂಬಿಸುತ್ತಿರುವ ಪೊಲೀಸಪ್ಪ!

ABOUT THE AUTHOR

...view details