ಧಾರವಾಡ: ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಸರ್ಕಾರದ ಅನೇಕ ಯೋಜನೆಗಳಿಗೆ ಅನುಧಾನ ಬಿಡುಗಡೆಗೊಳಿಸದ ಹಿನ್ನೆಲೆ ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ - ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಮಹಿಳಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಮತ್ತು ವಿವಿಧ ಯೋಜನೆಗಳಿಗೆ ಅನುಧಾನ ಬಿಡುಗಡೆಗೊಳಿಸಬೇಕೆಂದು, ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.