ಕರ್ನಾಟಕ

karnataka

ETV Bharat / state

ಬಣ್ಣ ದರ್ಪಣ ಕಾರ್ಯಕ್ರಮದ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶ: ಓರ್ವ ಸಾವು, ಇನ್ನೋರ್ವ ಗಂಭೀರ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬಣ್ಣ ದರ್ಪಣ ಕಾರ್ಯಕ್ರಮದ ಬ್ಯಾನರ್​ಗಳನ್ನು ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶ
ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶ

By

Published : Oct 29, 2022, 1:11 PM IST

Updated : Oct 29, 2022, 3:00 PM IST

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಬಣ್ಣ ದರ್ಪಣ ಕಾರ್ಯಕ್ರಮದ ಬ್ಯಾನರ್ ಕಟ್ಟಲು ಹೋಗಿ ಇಬ್ಬರು ಕಾರ್ಮಿಕರಿಗೆ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಇಂದು ಕುಂದಗೋಳ ಪಟ್ಟಣದ ಶ್ರೀ ಹರಭಟ್ಟ ಹೈಸ್ಕೂಲ್ ಮೈದಾನದಲ್ಲಿ ಎಲ್ಲ ಸರ್ಕಾರಿ ಶಾಲಾ - ಕಾಲೇಜುಗಳಿಗೆ ಬಣ್ಣ ದರ್ಪಣೆ ಎಂಬ ಶೀರ್ಷಿಕೆ ಅಡಿಯಲ್ಲಿ ಬಣ್ಣ ಹಚ್ಚುವ ಅಭಿಯಾನವನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯ ಸಭಾ ಸದಸ್ಯ ಜಗ್ಗೇಶ್​ ಸೇರಿದಂತೆ ಹಲವು ಗಣ್ಯಾತೀಗಣ್ಯರು ಭಾಗಿಯಾಗಲಿದ್ದರು.

ಇದನ್ನೂ ಓದಿ:ಬಣ್ಣ ನಮ್ಮದು, ಶಾಲೆಗೆ ಸಹಾಯ ನಿಮ್ಮದು : ಬಣ್ಣ ದರ್ಪಣ ಅಭಿಯಾನ ಆರಂಭಿಸಿದ ಪ್ರಹ್ಲಾದ ಜೋಶಿ

ಕಾರ್ಯಕ್ರಮ ಪ್ರಚಾರದ ಬ್ಯಾನರ್​ಗಳನ್ನು ಕುಂದಗೋಳ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಕಟ್ಟುವ ಕೆಲಸ ಮಾಡುತ್ತಿದ್ದಾಗ ಗುಡೇನಕಟ್ಟಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಬಸಾಪುರ ಗ್ರಾಮದ ಇಸ್ಮಾಯಿಲ್ ಒಗ್ಗರಣಿ ಎಂಬಾತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರಕಾಶ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Last Updated : Oct 29, 2022, 3:00 PM IST

ABOUT THE AUTHOR

...view details