ಧಾರವಾಡ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ವೇತನ ಬಾಕಿ ಪಾವತಿ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ - Workers' Union Protest
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
ವಸತಿ ಶಾಲೆ ಮತ್ತು ಕಾರ್ಯನಿರತ ಮಹಿಳಾ ಹಾಸ್ಟೆಲ್‌ಗಳ 2 ಸಾವಿರಕ್ಕೂ ಹೆಚ್ಚು ಹೊರ ಗುತ್ತಿಗೆ ಕಾರ್ಮಿಕರು ಕಳೆದ 17-18 ತಿಂಗಳುಗಳಿಂದ ಕೇವಲ ಕನಿಷ್ಠ ಕೂಲಿ ಪಡೆಯುತ್ತಿದ್ದು, ಕೂಡಲೇ ಅವರಿಗೆ ಕೂಲಿ ಪಾವತಿಸಬೇಕು ಎಂದು ಆಗ್ರಹಿಸಿದರು.
ಜೂನ್ ತಿಂಗಳಿನಿಂದ ವೇತನ ಪಾವತಿ ಮಾಡಿ ಕಾರ್ಮಿಕರಿಗೆ ಕೆಲಸವನ್ನು ನೀಡಬೇಕು. ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಇಎಸ್‌ಐ ಮತ್ತು ಪಿಎಫ್ ಪಾವತಿ ಮಾಡಿರುವ ದಾಖಲೆಗಳನ್ನು ಕಾರ್ಮಿಕರಿಗೆ ಒದಗಿಸಬೇಕು. ಇಲ್ಲವೇ ಇಲಾಖೆಯಿಂದಲೇ ಸೌಲಭ್ಯಗಳನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.