ಧಾರವಾಡ:ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ನಿಮಿತ್ತ ಧಾರವಾಡದಲ್ಲಿ ಜನಜಾಗೃತಿ ಜಾಥ ನಡೆಸಲಾಯಿತು. ಜಾಥಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ನಗರದ ಕಲಾಭವನ ಆವರಣದಲ್ಲಿ ಚಾಲನೆ ನೀಡಿದ್ರು.
ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ: ಧಾರವಾಡದಲ್ಲಿ ಜಾಗೃತಿ ಜಾಥ - recent jantha news in dharwad
ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ನಿಮಿತ್ತ ಧಾರವಾಡದಲ್ಲಿ ಜನಜಾಗೃತಿ ಜಾಥ ನಡೆಯಿತು. ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥ ಮೂಲಕ ಆತ್ಮಹತ್ಯೆ ತಡೆಗಟ್ಟುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಆತ್ಮಹತ್ಯೆ ತಡೆಗೆ ಜಾಗೃತಿ ಜಾಥಾ
ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಪ್ರಯುಕ್ತ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥದಲ್ಲಿ ಆತ್ಮಹತ್ಯೆ ಅಪರಾಧ ಎಂದು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್. ಚಿನ್ನಣ್ಣವರ, ಡಿಮಾನ್ಸ್ ಪ್ರಭಾರ ನಿರ್ದೇಶಕ ಡಾ.ಮಹೇಶ ದೇಸಾಯಿ, ವಕೀಲರ ಸಂಘದ ಅಧ್ಯಕ್ಷ ಬಿ.ಎಸ್ ಗೋಡ್ಸೆ, ಡಿಎಚ್ಓ ಡಾ.ಯಶವಂತ, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ವಿ.ಡಿ. ಕರ್ಪೂರಮಠ ಸೇರಿದಂತೆ ಆರೋಗ್ಯ ಇಲಾಖೆ, ಎನ್.ಸಿ.ಸಿ, ಎನ್.ಎಸ್.ಎಸ್, ನರ್ಸಿಂಗ್ ಕಾಲೇಜು ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು ಜಾಥದಲ್ಲಿ ಪಾಲ್ಗೊಂಡಿದ್ದರು.