ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಫೆ.8ರಿಂದ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ - ರೇಣುಕಾ ಯಲ್ಲಮ್ಮ

ಇದೇ ತಿಂಗಳು 8ರಿಂದ 11ರವರೆಗೆ ಹುಬ್ಬಳ್ಳಿಯ ಜಗದೀಶನಗರದಲ್ಲಿ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ

ಜಾತ್ರಾ ಮಹೋತ್ಸವ
ಜಾತ್ರಾ ಮಹೋತ್ಸವ

By

Published : Feb 7, 2020, 2:56 PM IST

ಹುಬ್ಬಳ್ಳಿ:ರೇಣುಕಾ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಹಾಗೂ ಶಿಕ್ಕಲಗಾರ ಸಮಾಜ ಸೇವಾ ಸಂಘದ ವತಿಯಿಂದ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಇದೇ ತಿಂಗಳು 08 ರಿಂದ 11ರವರೆಗೆ ಜಗದೀಶನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹರೀಶ ಜಂಗಲಿ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಹುಣ್ಣಿಮೆಯ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಫೆ.08ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಗಣೇಶ ಪೂಜೆ, ಗಣಹೋಮ, ನವಗ್ರಹ ಶಾಂತಿ ಹಾಗೂ ರಾತ್ರಿ 8-30ಕ್ಕೆ ಮನರಂಜನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು‌.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಹರೀಶ ಜಂಗಲಿ

9ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಳಗ್ಗೆ 5ಗಂಟೆಗೆ ಅಭಿಷೇಕ, ಕುಂಕುಮಾರ್ಚನೆ, ಅಲಂಕಾರ ಹಾಗೂ ಮಹಾಪೂಜೆ ನೆರವೇರಲಿದೆ. ಬೆಳಗ್ಗೆ 9ಕ್ಕೆ ಯಲ್ಲಮ್ಮ ದೇವಿ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. 10ರಂದು ಉತ್ಸವ ಮೂರ್ತಿಗೆ ಪಂಚಾಮೃತ ಅಭಿಷೇಕ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ. 11ರಂದು ರಾತ್ರಿ ಬಾರಿ ಸವಾಲ್ ಜವಾಬ್ ಭಜನಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದರು.

ABOUT THE AUTHOR

...view details