ಕರ್ನಾಟಕ

karnataka

ETV Bharat / state

ಕರ್ತವ್ಯಲೋಪ ಆರೋಪದ ಮೇಲೆ ಯರಗುಪ್ಪಿ ಗ್ರಾಪಂ ಪಿಡಿಒ ಅಮಾನತುಗೊಳಿಸಿ ಜಿಪಂ ಸಿಇಒ ಆದೇಶ

ತನಿಖಾ ತಂಡದ ವರದಿ ಆಧರಿಸಿ ಯರಗುಪ್ಪಿ ಗ್ರಾಪಂತಿ ಪಿಡಿಒ ಸರಿಯಾಗಿ ಕರ್ತವ್ಯ ನಿರ್ವಹಿಸದೆ, ಅನಧಿಕೃತ ಗೈರು ಹಾಜರು, ಯೋಜನಾ ಅನುಷ್ಠಾನದಲ್ಲಿ ವಿಳಂಬ ಹಾಗೂ ಉನ್ನತ ಅಧಿಕಾರಿಗಳ ನಿರ್ದೇಶನಗಳನ್ನು ಪಾಲಿಸದಿರುವ ಕುರಿತು ವರದಿ ಸಲ್ಲಿಸಿ, ಪಿಡಿಒ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಶಿಫಾರಸು ಮಾಡಿದ್ದರು..

District Panchayat CEO orders for investigation
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಆದೇಶ

By

Published : Jan 14, 2022, 6:54 PM IST

ಧಾರವಾಡ : ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕರ್ತವ್ಯಲೋಪ ಮಾಡಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಈ ಹಿನ್ನೆಲೆ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜ.10, 2022ರಂದು ಪಿಡಿಒ ನವಾಬ್‍ಸಾಬ್ ಅಲಿಸಾಬ್ ನದಾಫ್ ಅವರನ್ನು ಅಮಾನತುಗೊಳ್ಳಿಸಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಪಂ ಪಂಚಾಯತ್​​ ಅಭಿವೃದ್ಧಿ ಅಧಿಕಾರಿ ಕರ್ತವ್ಯಲೋಪ ಮಾಡಿರುವ ಕುರಿತು ತನಿಖೆ ಕೈಗೊಂಡು ವರದಿ ಸಲ್ಲಿಸಲು ಕುಂದಗೋಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ನಿರ್ದೇಶಿಸಲಾಗಿತ್ತು. ಅದರಂತೆ ಅವರು ಅಧಿಕಾರಿಗಳ ತಂಡ ರಚಿಸಿ, ಯರಗುಪ್ಪಿ ಗ್ರಾಪಂಗೆ ಭೇಟಿ ನೀಡಿ, ವರದಿ ನೀಡಲು ಕ್ರಮ ಕೈಗೊಂಡಿದ್ದರು.

ಇದನ್ನೂ ಓದಿ: ಅನಾರೋಗ್ಯದಿಂದ ಕವಿ ನಾಡೋಜ ಚನ್ನವೀರ‌ ಕಣವಿ ಆಸ್ಪತ್ರೆಗೆ ದಾಖಲು

ತನಿಖಾ ತಂಡದ ವರದಿ ಆಧರಿಸಿ ಯರಗುಪ್ಪಿ ಗ್ರಾಪಂತಿ ಪಿಡಿಒ ಸರಿಯಾಗಿ ಕರ್ತವ್ಯ ನಿರ್ವಹಿಸದೆ, ಅನಧಿಕೃತ ಗೈರು ಹಾಜರು, ಯೋಜನಾ ಅನುಷ್ಠಾನದಲ್ಲಿ ವಿಳಂಬ ಹಾಗೂ ಉನ್ನತ ಅಧಿಕಾರಿಗಳ ನಿರ್ದೇಶನಗಳನ್ನು ಪಾಲಿಸದಿರುವ ಕುರಿತು ವರದಿ ಸಲ್ಲಿಸಿ, ಪಿಡಿಒ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಶಿಫಾರಸು ಮಾಡಿದ್ದರು.

ಅದರಂತೆ ತನಿಖೆ ಕೈಗೊಂಡು ಜನವರಿ 10, 2022 ರಂದು ಇಲಾಖಾ ವಿಚಾರಣೆ ಕಾಯ್ದಿರಿಸಿ, ಯರಗುಪ್ಪಿ ಗ್ರಾಪಂ ಪಿಡಿಒ ನವಾಬ್‍ಸಾಬ್ ಅಲಿಸಾಬ್ ನದಾಫ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಅಲ್ಲದೇ ಅಮಾನತುಗೊಂಡ ನೌಕರನು ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ನಿರ್ದೇಶಿಸಲಾಗಿದೆ.

ಬೂತರ್ಲಘಟ್ಟ ಗ್ರಾಪಂ ಪಿಡಿಒ ಪುಷ್ಪಾವತಿ ಮೇದಾರ ಅವರಿಗೆ ಯರಗುಪ್ಪಿ ಗ್ರಾಪಂ ಪಿಡಿಒ ಆಗಿ ಹೆಚ್ಚುವರಿ ಚಾರ್ಜ್​ ನೀಡಿ ನೇಮಿಸಲಾಗಿದೆ. ಗ್ರಾಪಂ ಪಿಡಿಒ ವಿರುದ್ಧ ಕೇಳಿ ಬಂದಿರುವ ದೂರುಗಳ ಕುರಿತು ಪಾರದರ್ಶಕವಾಗಿ ಸಮಗ್ರ ತನಿಖೆ ಕೈಗೊಂಡು, ಆದಷ್ಟು ಬೇಗನೆ ವರದಿ ನೀಡುವಂತೆ ನಿರ್ದೇಶಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ. ಸುಶೀಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details