ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ! - ವಿನಯ ಕುಲಕರ್ಣಿ ವಶ ಸುದ್ದಿ,
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಮತ್ತು ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ
ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಅವರ ನಿವಾಸದಲ್ಲೇ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಾಜಿ ಸಚಿವರ ವಿಚಾರಣೆ ನಡೆಸಲಿದ್ದಾರೆ.
ಯೋಗೀಶ್ ಗೌಡ ಹತ್ಯೆ ವಿಚಾರದಲ್ಲಿ ವಿನಯ್ ಕುಲಕರ್ಣಿ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಈಗಾಗಲೇ ಯೋಗೇಶ್ ಗೌಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಜನರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.
Last Updated : Nov 5, 2020, 8:57 AM IST