ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದಾರೆ.
ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐನಿಂದ ಮತ್ತಿಬ್ಬರ ವಿಚಾರಣೆ - ಯೋಗೀಶ ಗೌಡ ಹತ್ಯೆ ಪ್ರಕರಣ
ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮತ್ತಿಬ್ಬರ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಯೋಗೀಶ ಗೌಡ
ಧಾರವಾಡದ ಉಪನಗರ ಠಾಣೆಯಲ್ಲಿ ಸಿಬಿಐ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಉದಯ್ ಜಿಮ್ ಟ್ರೈನರ್ ವಿವೇಕ ದಳವಾಯಿ ಹಾಗೂ ಹುಬ್ಬಳ್ಳಿ ಮೂಲದ ಹೋಟೆಲ್ ಮಾಲೀಕರ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹತ್ಯೆ ನಂತರ ನಡೆದ ಘಟನೆಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಒಟ್ಟಿನಲ್ಲಿ ಸಿಬಿಐ ಅಧಿಕಾರಿಗಳು ಯೋಗೀಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.