ಕರ್ನಾಟಕ

karnataka

ETV Bharat / state

ಯೋಗೇಶ್​ ಗೌಡ ಹತ್ಯೆ ಪ್ರಕರಣ... ಸಹೋದರನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಗುರುನಾಥಗೌಡ - Murder case

ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ಸಿಬಿಐ ತಂಡ ಆಗಮಿಸಿ ‌ಮಾಹಿತಿ‌ ಕಲೆ ಹಾಕಿದೆ.

ಸಹೋದರನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಗುರುನಾಥಗೌಡ

By

Published : Sep 28, 2019, 8:14 PM IST

ಧಾರವಾಡ:ಹುಬ್ಬಳ್ಳಿ ಜಿಲ್ಲಾ ಪಂಚಾಯತ್​ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ನೀಡಿದ ಹಿನ್ನೆಲೆ ಧಾರವಾಡದಲ್ಲಿ‌ ಸಿಬಿಐ ಅಧಿಕಾರಿಗಳ ತಂಡ ಬೀಡು ಬಿಟ್ಟಿದೆ.

ಸಹೋದರನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಗುರುನಾಥಗೌಡ

ಇದನ್ನು ಓದಿ: ಯೋಗೇಶ್ ಗೌಡ ಕೊಲೆ ಪ್ರಕರಣ: ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದ ಸಿಬಿಐ

ಬೆಳಗಿನ ಜಾವ ಗುರುನಾಥಗೌಡ ಮತ್ತು ಮೃತ ಯೋಗೀಶಗೌಡ ಪತ್ನಿ ಮಲ್ಲಮ್ಮ ಗೌಡರ ಮನೆಗೆ ಅಧಿಕಾರಿಗಳ ಭೇಟಿ ನೀಡಿ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಭೇಟಿ ಬಳಿಕ ಯೋಗೀಶಗೌಡ ಸಹೋದರ ಗುರುನಾಥಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಮನವಿಗೆ ಸ್ಪಂದಿಸಿ ಸಿಬಿಐಗೆ ವಹಿಸಿದೆ ಈ ಹಿನ್ನೆಲೆ ಅಧಿಕಾರಿಗಳು ಧಾರವಾಡಕ್ಕೆ ಆಗಮಿಸಿದ್ದಾರೆ. ನಮ್ಮ ಮನೆಗೆ ಭೇಟಿ ನೀಡಿ ಕೆಲವು ಮಾಹಿತಿ ಕಲೆ ಹಾಕಿದ್ದಾರೆ. ಅಧಿಕಾರಿಗಳಿಗೆ ಪೂರಕವಾಗಿ ಸ್ಪಂದನೆ ನೀಡಿದ್ದೇವೆ. ನಮ್ಮ ಸಹೋದರನ ಸಾವಿಗೆ ನ್ಯಾಯ ದೊರೆಯುವ ಲಕ್ಷಣ ಕಂಡು ಬರುತ್ತಿದೆ ಎಂದು ತಿಳಿಸಿದರು.

ABOUT THE AUTHOR

...view details