ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಬಿಐ ಅಧಿಕಾರಿಗಳು ಧಾರವಾಡಕ್ಕೆ ಆಗಮಿಸಿದ್ದಾರೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಧಾರವಾಡಕ್ಕೆ ಆಗಮಿಸಿದ ಸಿಬಿಐ ತಂಡ - Yogesh Gowda murder case CBI investigation
ಜಿ.ಪಂ. ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಬಿಐ ಅಧಿಕಾರಿಗಳು ಧಾರವಾಡಕ್ಕೆ ಆಗಮಿಸಿದ್ದು, ಇಂದು ಸಹ ಅನೇಕರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಧಾರವಾಡಕ್ಕೆ ಆಗಮಿಸಿದ ಸಿಬಿಐ ತಂಡ
ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಅನೇಕ ಜನರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಬಂಧಿಸಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಸಹ ಅನೇಕರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ತನಿಖಾಧಿಕಾರಿ ರಾಕೇಶ ರಂಜನ್ ನೇತೃತ್ವದ ತಂಡ ಧಾರವಾಡ ಉಪನಗರ ಠಾಣೆಗೆ ಆಗಮಿಸಿದೆ. ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಸೇರಿದಂತೆ ಅನೇಕರನ್ನು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡೆಸಿದೆ.
Last Updated : Nov 20, 2020, 12:15 PM IST