ಧಾರವಾಡ :ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶ ಆರೋಪ ಕೇಸ್ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಈಗಾಗಲೇ ಯೋಗೀಶ್ ಗೌಡ ಕೊಲೆ ಕೇಸ್ನಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಕುಲಕರ್ಣಿ ಸೇರಿ 8 ಜನರಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. 8 ಜನರು ಇಂದಿನ ವಿಚಾರಣೆಗೆ ಗೈರಾದ ಹಿನ್ನೆಲೆ, ಪುನಃ ಹಾಜರಾಗಲು ನ್ಯಾಯಾಲಯ ಮತ್ತೊಂದು ಅವಕಾಶ ನೀಡಿದೆ. ಫೆ. 10ರಂದು ಹಾಜರಾಗಲು ಸೂಚಿಸಿ, ವಿಚಾರಣೆ ಮುಂದೂಡಿಕೆ ಮಾಡಿದೆ.